ಮುಂಬೈ: ಜೂನ್ 9 ರಂದು ಸತತ 3ನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಏಷ್ಯಾದ ಮೊದಲ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಭಾಗವಹಿಸಲಿದ್ದಾರೆ ಎಂದು ಕೇಂದ್ರ ರೈಲ್ವೆ ವಿಭಾಗದ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಜೂನ್ 9 ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ, ಸುರೇಖಾ ಯಾದವ್ ಸೇರಿ, 10 ಮಂದಿ ಲೋಕೋ ಪೈಲಟ್ಗಳನ್ನು ಆಹ್ವಾನಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
.ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್ ಅಧ್ಯಕ್ಷರಿಗೂ ಆಹ್ವಾನ.
ಪಶ್ಚಿಮ ಮಹಾರಾಷ್ಟ್ರದ ಸತಾರ ಮೂಲದವರಾದ ಸುರೇಖಾ ಅವರು ಲೋಕೋ ಪೈಲೆಟ್ ಆಗಿ 1988ರಲ್ಲಿ ರೈಲ್ವೆ ಇಲಾಖೆ ಸೇರಿದ್ದರು. ಹೀಗಾಗಿ ಅವರು ಏಷ್ಯಾದಲ್ಲೇ ಮೊದಲ ಲೊಕೊ ಪೈಲೆಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಲ್ಲದೇ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವಿನ ಸೆಮಿ ಹೈಸ್ಪೀಡ್ ರೈಲನ್ನು ಚಲಾಯಿಸಿದ ದೇಶದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ತಮ್ಮ ಸಾಧನೆಗಳಿಗಾಗಿ ಅವರು ಅನೇಕ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ.
.ಮೋದಿ ಪ್ರಮಾಣ ವಚನ ಸಮಾರಂಭ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾಗಿ ಸಾಧ್ಯತೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಕೂಟ 293 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ. ಉಳಿದಂತೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಭೂತಾನ್ ಪ್ರಧಾನಿ ಶೇರಿಂಗ್ ಟೋಬಗೇ, ಮಾರಿಷಿಸ್ನ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್ಗೆ ಆಮಂತ್ರಣ ನೀಡಲಾಗಿದೆ.
.ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ: ಜೂನ್ 8ರ ಬದಲಾಗಿ 9ಕ್ಕೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.