ಮುಂಬೈ: ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ ಸಂಬಂಧ ಮುಂಬೈ ಅಪರಾಧ ವಿಭಾಗದ ಪೊಲೀಸರು ಭಾನುವಾರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಶೂಟರ್ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪದ ಮೇಲೆ ಗುಜರಿ ವ್ಯಾಪಾರಿ ಭಾಗ್ವತ್ ಸಿಂಗ್ ಓಂ ಸಿಂಗ್ (32) ಎಂಬಾತನನ್ನು ಬಂಧಿಸಲಾಗಿದೆ. ಈತ ನವಿಮುಂಬೈ ನಿವಾಸಿಯಾಗಿದ್ದು, ರಾಜಸ್ಥಾನದ ಉದಯಪುರದ ಮೂಲದವರು.

ಅ.26ರವರೆಗೆ ಪೊಲೀಸ್ ವಶಕ್ಕೆ ಕೋರ್ಟ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿದ್ದೀಕಿ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಕೆ ಹಾಗೂ ಇನ್ನಿತರ ಬೆಂಬಲ ನೀಡಿದ ಆರೋಪದ ಮೇಲೆ ಮುಂಬೈ ನಗರ ಪ್ರದೇಶದ ಐವರು ಸೇರಿದಂತೆ ವಿವಿಧ ಸ್ಥಳಗಳಿಂದ ಹಲವರನ್ನು ಬಂಧಿಸಲಾಗಿದೆ.

ಶಂಕಿತ ಶೂಟರ್ಗಳಾದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಧರ್ಮರಾಜ್ ರಾಜೇಶ್ ಕಶ್ಯಪ್ (19) ಈಗಾಗಲೇ ಪೊಲೀಸ್ ವಶದಲ್ಲಿದ್ದಾರೆ. ಮುಖ್ಯ ಶೂಟರ್ ಶಿವಕುಮಾರ್ ಗೌತಮ್ ಮತ್ತು ಇತರೆ ಇಬ್ಬರು ತಲೆ ಮರೆಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಅವರನ್ನು ಅ.12ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.