ತಿರುವನಂತಪುರ: ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮನುಷ್ಯರಿಗೆ ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ಹೇಳಿದ್ದಾರೆ.

ಅಗತ್ಯ ಕ್ರಮ ಕೈಗೊಳ್ಳವಂತೆ ಎಲ್ಲಾ ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗಿದ್ದು, ಪ್ರತಿಯೊಬ್ಬರೂ ಆರೋಗ್ಯ ಇಲಾಖೆ ಹೊರಡಿಸಿದ ನಿರ್ದೇಶನಗಳನ್ನು ಅನುಸರಿಸಬೇಕು. ಬಾಧಿತ ಪ್ರದೇಶಗಳಲ್ಲಿನ ಜನರಲ್ಲಿ ಜ್ವರ ಮತ್ತು ಇತರ ರೋಗಲಕ್ಷಣಗಳನ್ನು ಆರೋಗ್ಯ ಇಲಾಖೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕ ಬೆನ್ನು ನೋವು, ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಶೀತ ಮತ್ತು ಕಫದಲ್ಲಿ ರಕ್ತ ಸೋಂಕಿನ ಲಕ್ಷಣಗಳಾಗಿವೆ. ಈ ರೋಗ ಲಕ್ಷಣ ಹಾಗೂ ಉಸಿರಾಟದ ತೊಂದರೆಗಳಿದ್ದರೆ ತಕ್ಷಣ ಸಮೀಪದ ಆರೋಗ್ರ ಕೇಂದ್ರ ಮತ್ತು ವೈದ್ಯರನ್ನು ಭೇಟಿ ಮಾಡಬೇಕು. ಸೋಂಕಿತ ಮತ್ತು ಆರೋಗ್ಯಕರ ಪಕ್ಷಿಗಳೊಂದಿಗೆ ಸಂಪರ್ಕಕ್ಕೆ ಬರುವವರು ಕೈಗವಸು, ಮುಖಗವಸು ಧರಿಸುವುದು ಮತ್ತು ಆಗಾಗ್ಗೆ ಕೈಗಳನ್ನು ತೊಳೆಯುವಂತಹ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಶನಿವಾರ, ಕೊಟ್ಟಾಯಂ ಜಿಲ್ಲೆಯ ಚೆಂಪು ಪಂಚಾಯತ್ ವಾರ್ಡ್ ಒಂದರಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಬಾತುಕೋಳಿಗಳು, ಕೋಳಿಗಳು ಸೇರಿದಂತೆ 1,317 ಪಕ್ಷಿಗಳನ್ನು ಕೊಲ್ಲಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.