ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ 29 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಮಂಗಳವಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಪಕ್ಷವು 45 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ನಗರೋಟ ಕ್ಷೇತ್ರದಲ್ಲಿ ದೇವೇಂದ್ರ ಸಿಂಗ್ ರಾಣಾ ಮತ್ತು ಬಿಲ್ಲಾವರ್ ಕ್ಷೇತ್ರದಿಂದ ಸತೀಶ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ನೂತನ ಪಟ್ಟಿಯು ಎರಡನೇ ಮತ್ತು ಮೂರನೇ ಹಂತದ ಚುನಾವಣೆಗೆ ಸ್ಪರ್ಧಿಸುವ, ಕ್ರಮವಾಗಿ 10 ಮತ್ತು 19 ಅಭ್ಯರ್ಥಿಗಳ ಹೆಸರುಗಳನ್ನು ಒಳಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದಲ್ಲಿ, ಸೆಪ್ಟೆಂಬರ್ 18, 25 ಹಾಗೂ ಅಕ್ಟೋಬರ್ 1ರಂದು ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.