ನವದೆಹಲಿ: ಈಶಾನ್ಯ ಫ್ರಾಂಟಿಯರ್ ರೈಲ್ವೆ ವಲಯದಲ್ಲಿ 2016–23ರ ಅವಧಿಯಲ್ಲಿ ನಡೆದಿದೆ ಎನ್ನಲಾದ ₹60 ಕೋಟಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆಯ ಏಳು ಅಧಿಕಾರಿಗಳು ಹಾಗೂ ಭಾರತೀಯ ಇನ್ಫ್ರಾ ಪ್ರಾಜೆಕ್ಟ್ಸ್ ಲಿಮಿಟೆಡ್ (ಬಿಐಪಿಎಲ್) ಎನ್ನುವ ಖಾಸಗಿ ಕಂಪನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲೇ ಬೃಹತ್ ಎನ್ನಲಾಗುವ ಈ ಹಗರಣದ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ, ಅಸ್ಸಾಂ, ತ್ರಿಪುರಾ, ಮಣಿಪುರ ಮತ್ತು ದೆಹಲಿಯಲ್ಲಿ ಆರೋಪಿಗಳು ಹಾಗೂ ಕಂಪನಿಗೆ ಸೇರಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು.

ಈ ವೇಳೆ ಹಗರಣದ ಪ್ರಮುಖ ಸಾಕ್ಷ್ಯಗಳು ಹಾಗೂ ಆರೋಪಿಗಳ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 2016 ಮತ್ತು ಜುಲೈ 2023ರ ನಡುವೆ ರೈಲ್ವೆ ಅಧಿಕಾರಿಗಳು ಬಿಐಪಿಎಲ್ನಿಂದ ನಗದಿನ ಮೂಲಕ ಹಾಗೂ ತಮ್ಮ ಸಂಬಂಧಿಕರ ಬ್ಯಾಂಕ್ ಖಾತೆಗಳ ಮೂಲಕ ಹಣ ಪಡೆದಿರುವುದು ಬಹಿರಂಗಗೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ‘ಬಿಲ್ಗಳನ್ನು ಪಾವತಿಸಲು‘ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.