ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಕಿಪಾಕ್ಸ್‌ ಶಂಕಿತರನ್ನು ತಪಾಸಣೆಗೆ ಒಳಪಡಿಸಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

Published : 9 ಸೆಪ್ಟೆಂಬರ್ 2024, 10:39 IST
Last Updated : 9 ಸೆಪ್ಟೆಂಬರ್ 2024, 10:39 IST
ಫಾಲೋ ಮಾಡಿ
Comments

ನವದೆಹಲಿ: ಮಂಕಿಪಾಕ್ಸ್‌ ಕಾಯಿಲೆಯ ಶಂಕಿತರನ್ನು ತಪಾಸಣೆಗೆ ಒಳಪಡಿಸುವಂತೆ ಹಾಗೂ ಶಂಕಿತರನ್ನು ಮತ್ತು ಕಾಯಿಲೆ ದೃಢಪಟ್ಟವರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಲು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ. 

ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿರುವ ಕೆಂದ್ರ ಆರೋಗ್ಯ ಸಚಿವಾಲಯದ ನಿರ್ದೇಶಕ ಅಪೂರ್ವ ಚಂದ್ರ ಅವರು, ಮಂಕಿಪಾಕ್ಸ್‌ ಬಗ್ಗೆ ಜನಸಾಮಾನ್ಯರಿಗಿರುವ ಅನಗತ್ಯ ಭೀತಿಯನ್ನು ನಿವಾರಿಸಿ ಎಂದು ಸಲಹೆ ನೀಡಿದ್ದಾರೆ. 

‘ಭಾರತದಲ್ಲಿ ಹೊಸದಾಗಿ ಮಂಕಿಪಾಕ್ಸ್‌ ಪ್ರಕರಣಗಳು ವರದಿಯಾಗಿವೆ, ಆದರೆ ಯಾವ ಪ್ರಕರಣಗಳ ವರದಿಯೂ ಮಂಕಿಪಾಕ್ಸ್ ಸೋಂಕು ಇರುವುದನ್ನು ದೃಢಪಡಿಸಿಲ್ಲ, ಆದರೂ ಎಚ್ಚರಿಕೆಯಿಂದಿರಬೇಕು. ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿನ ಐಸೋಲೇಷನ್‌ ಸೌಲಭ್ಯ, ತರಬೇತಿ ಪಡೆದ ವೈದ್ಯರು ಇರುವಂತೆ ಮತ್ತು ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳು ಇರುವಂತೆ ನೋಡಿಕೊಳ್ಳಬೇಕು. ಶಂಕಿತರು ಮತ್ತು ಸೋಂಕು ದೃಢಪಟ್ಟವರ ಸಂಪರ್ಕಕ್ಕೆ ಬಂದ ಇತರರನ್ನು ಪತ್ತೆ ಮಾಡುವ ಕೆಲಸವನ್ನು ಮಾಡಬೇಕು ಎಂದು ರಾಜ್ಯಗಳಿಗೆ ಸಚಿವಾಲಯ ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT