ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರೇ ಆಗಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದರಿಂದ ಚಂಪೈ ಸೋರೆನ್ ಇಂದು ಸಂಜೆ ರಾಜೀನಾಮೆ ಸಲ್ಲಿಸಿದರು.

ಈ ಮೂಲಕ ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಚಿತವಾಗಿದೆ. ಅವರು ಸರ್ಕಾರ ರಚನೆಗೆ ಹಕ್ಕೊತ್ತಾಯವನ್ನೂ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಚಾಂಪೈ ಸೊರೇನ್ ಅವರ ನಿವಾಸದಲ್ಲಿ ಬೆಳಿಗ್ಗೆ ನಡೆದ ಮೈತ್ರಿಕೂಟದ ನಾಯಕರ ಸಭೆಯಲ್ಲಿ, ಹೇಮಂತ್ ಸೊರೇನ್ ಅವರನ್ನು ಜೆಎಎಂನ ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿಗಿತ್ತು.

ಚಾಂಪೈ ಸೊರೇನ್ ಅವರನ್ನು ಬದಲಾಯಿಸುವ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು ಎಂದು ಸಭೆಯಲ್ಲಿ ಹಾಜರಿದ್ದ ಮುಖಂಡರೊಬ್ಬರು ಪಿಟಿಐ ಜೊತೆ ಹೇಳಿಕೊಂಡಿದ್ದಾರೆ.

ಮೂರನೇ ಬಾರಿಗೆ ಹೇಮಂತ್ ಸೊರೇನ್ ಸಿಎಂ ಆಗುತ್ತಿದ್ದಾರೆ.

ಜಾರ್ಖಂಡ್ ಕಾಂಗ್ರೆಸ್ನ ಉಸ್ತುವಾರಿ ಗುಲಾಮ್ ಅಹಮದ್ ಮಿರ್, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಾಜೇಶ್ ಠಾಕೂರ್, ಹೇಮಂತ್ ಸೊರೇನ್ ಸಹೋದರ ಬಸಂತ್ ಹಾಗೂ ಪತ್ನಿ ಕಲ್ಪನಾ ಅವರೂ ಸಭೆಯಲ್ಲಿ ಹಾಜರಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಅವರು ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು, ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.