ಸುಲ್ತಾನಪುರ: 2021ರಲ್ಲಿ ಕೋವಿಡ್–19 ನಿಯಮ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಎಎಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್, ಈ ಕುರಿತು ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶನಿವಾರ ಗೈರು ಹಾಜರಾಗಿದ್ದಾರೆ.

ತಮ್ಮ ಕಕ್ಷಿದಾರ ಸಂಸತ್ತಿನ ಕಲಾಪದಲ್ಲಿ ತೊಡಗಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅವರ ಪರ ವಕೀಲರು ಸಂಸದರ–ಶಾಸಕರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದ ಮುಂದಿನ ವಿಚಾರಣೆಗೆ ಜುಲೈ 6 ಅನ್ನು ನಿಗದಿಪಡಿಸಲಾಗಿದೆ.

ಜೂನ್ 21ರಂದು ಈ ಕುರಿತು ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯವು, ವಿಚಾರಣೆಗೆ ಹಾಜರಾಗುವುದರಿಂದ ನಿರಂತರವಾಗಿ ತಪ್ಪಿಸಿಕೊಳ್ಳುತ್ತಿರುವ ಸಂಜಯ್ ಸಿಂಗ್ ವಿರುದ್ಧ ಬಂಧನದ ವಾರಂಟ್ ಹೊರಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.