ನವದೆಹಲಿ: ಫ್ಲ್ಯಾಟ್ ಖರೀದಿದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಇತರರನ್ನು ಆರೋಪಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿರುವ ದೆಹಲಿ ನ್ಯಾಯಾಲಯ ಹೊಸದಾಗಿ ತನಿಖೆಗೆ ಆದೇಶಿಸಿದೆ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ರದ್ದು ಮಾಡಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗನೆ, ಮ್ಯಾಜಿಸ್ಟ್ರೇ್ಟ್ ನ್ಯಾಯಾಲಯದ ಆದೇಶವು ಗಂಭೀರ್ ವಿರುದ್ಧದ ಆರೋಪಗಳನ್ನು ನಿರ್ಧರಿಸುವಲ್ಲಿ ಅಸಮರ್ಪಕ ಅಭಿವ್ಯಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

‘ಗಂಭೀರ್ ಅವರ ಮೇಲೆ ಬಂದಿರುವ ಆರೋಪವು ವಂಚನೆಯಲ್ಲಿ ಅವರ ಪಾತ್ರದ ಬಗ್ಗೆ ತನಿಖೆಗೆ ಪುಷ್ಠಿ ಒದಗಿಸುತ್ತದೆ’ಎಂದೂ ಆದೇಶದಲ್ಲಿ ಹೇಳಿದ್ದಾರೆ.

ರಿಯಲ್ ಎಸ್ಟೇಟ್ ಕಂಪನಿಗಳಾದ ರುದ್ರಾ ಬಿಲ್ಡ್ ವೆಲ್ ರಿಯಾಲ್ಟಿ ಪ್ರೈವೇಟ್ ಲಿಮಿಟೆಡ್. ಎಚ್.ಆರ್. ಇನನ್ಫ್ರಾಸಿಟಿ ಪ್ರೈವೆಟ್ ಲಿಮಿಟೆಡ್, ಯುಎಂ ಆರ್ಕಿಟೆಕ್ಚರ್ಸ್ ಆ್ಯಂಡ್ ಕಂಟ್ರಾಂಕ್ಟರ್ ಲಿಮಿಟೆಡ್ ಮತ್ತು ಕಂಪನಿಗಳ ಜಂಟಿ ಉದ್ಯಮದ ನಿರ್ದೇಶಕ ಮತ್ತು ಬ್ರಾಂಡ್ ಅಂಬಾಸಿಡರ್ ಆಗಿದ್ದ ಗಂಭೀರ್ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಬ್ರಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿರುವ ಏಕೈಕ ಆರೋಪಿ ಗಂಭೀರ್ ಆಗಿದ್ದು, ಆದರೂ ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಗಂಭೀರ್ ಅವರನ್ನು ಆರೋಪದಿಂದ ಮುಕ್ತಗೊಳಿಸಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದಲ್ಲಿ, ಗಂಭೀರ್ ರುದ್ರಾ ಬಿಲ್ಡ್ವೆಲ್ ರಿಯಾಲ್ಟಿ ಪ್ರೈವೇಟ್ಗೆ ₹6 ಕೋಟಿ ಪಾವತಿಸಿರುವ ಮತ್ತು ಕಂಪನಿಯಿಂದ ₹4.85 ಕೋಟಿ ಪಡೆದಿರುವ ಬಗ್ಗೆ ಉಲ್ಲೇಖವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.