ನವದೆಹಲಿ: ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದೆಹಲಿ ಸರ್ಕಾರ ಸೋಮವಾರ ಆದೇಶಿಸಿದೆ.

ಪಟಾಕಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯ ಮೇಲಿನ ನಿಷೇಧವು 2025ರ ಜನವರಿ 1 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಚಳಿಗಾಲದಲ್ಲಿ ಪಟಾಕಿಗಳನ್ನು ಸಿಡಿಸುವುದರಿಂದ ದೆಹಲಿಯಲ್ಲಿ ವಾತಾವರಣ ಇನ್ನಷ್ಟು ಹದಗೆಡಲಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ನಿಷೇಧ ಮಾಡುವುದು ಅನಿವಾರ್ಯ. ಕಳೆದ ವರ್ಷದಂತೆ ಈ ಬಾರಿಯೂ ಪಟಾಕಿಗಳ ಮಾರಾಟ ನಿಷೇಧಿಸಿದ್ದು, ಆನ್ಲೈನ್ನಲ್ಲಿ ಮಾರಾಟ ಮಾಡುವುದಕ್ಕೂ ಅವಕಾಶವಿಲ್ಲ. ಇದರಿಂದಾಗಿ ಜನರನ್ನು ಮಾಲಿನ್ಯದಿಂದ ರಕ್ಷಿಸಬಹುದು. ದೀಪ ಬೆಳಗುವ ಮೂಲಕ ಹಾಗೂ ಸಿಹಿ ಹಂಚುವ ಮೂಲಕ ಹಬ್ಬಗಳನ್ನು ಆಚರಿಸುವಂತೆ ಜನರಲ್ಲಿ ಮನವಿ ಮಾಡುತ್ತೇವೆ‘ ಎಂದು ಅವರು ತಿಳಿಸಿದ್ದಾರೆ.

ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ದೆಹಲಿ ಪೊಲೀಸರು, ದೆಹಲಿ ವಾಯು ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಕ್ರಿಯಾ ಯೋಜನೆಯೊಂದನ್ನು ಸಿದ್ಧಪಡಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
.ಪಟಾಕಿ ನಿಷೇಧಕ್ಕೆ ದೆಹಲಿ ಸರ್ಕಾರ ನಿರ್ಧಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.