ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮ) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹಾಗೂ ದುಬೈ ಮೂಲದ ಉದ್ಯಮಿ ದರ್ಶನ್ ಹೀರಾನಂದಾನಿಗೆ ಜಾರಿ ನಿರ್ದೇಶನಾಲಯ ಹೊಸ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ 28ರಂದು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.
.ಕಾಸಿಗಾಗಿ ಪ್ರಶ್ನೆ: ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ.
ಈ ಹಿಂದೆ ಇದೇ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಮಹುವಾ ಅವರಿಗೆ ಇ.ಡಿ ಎರಡು ಬಾರಿ ನೋಟಿಸ್ ಜಾರಿ ಮಾಡಿತ್ತು. ಆದರೆ ಅಧಿಕೃತ ಕೆಲಸವಿದೆ ಎನ್ನುವ ಕಾರಣ ನೀಡಿ, ನೋಟಿಸ್ ಮುಂದೂಡುವಂತೆ ಮನವಿ ಮಾಡಿದ್ದರು.

ಇದೇ ಪ್ರಕರಣದಲ್ಲಿ, ಮಹುವಾ ಮೊಯಿತ್ರಾ ಅವರಿಗೆ ಸಂಬಂಧಿಸಿದ ವಕೀಲರ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ಶೋಧ ನಡೆಸಿದೆ ಎನ್ನಲಾಗಿದೆ.
.ಕಾಸಿಗಾಗಿ ಪ್ರಶ್ನೆ: ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಎಫ್ಐಆರ್ .
ಪ್ರಶ್ನೆಗಾಗಿ ಕಾಸು ಪ್ರಕರಣ ಸಂಬಂಧ ಮಹುವಾ ಅವರಿಗೆ ಸೇರಿದ ಸ್ಥಳಗಳಲ್ಲಿ ಸಿಬಿಐ ಶನಿವಾರ ದಾಳಿ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.