ನವದೆಹಲಿ: ಎಲ್ಗಾರ್ ಪರಿಷತ್– ಮಾವೊ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಅವರ ಗೃಹಬಂಧನದ ಅವಧಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಫೆಬ್ರುವರಿ 17ರ ವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಗೌತಮ್ ಅವರ ಪುತ್ರಿ ವಿದೇಶದಲ್ಲಿದ್ದು, ಆಕೆಯ ದೂರವಾಣಿ ಕರೆಯನ್ನು ಸ್ವೀಕರಿಸಲು ಅನುಮತಿ ನೀಡಬೇಕೆಂದು ಗೌತಮ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲೆ ನಿತ್ಯಾ ರಾಮಕೃಷ್ಣನ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಗೌತಮ್ ಅವರನ್ನು ಗೃಹಬಂಧನಕ್ಕೆ ಹಸ್ತಾಂತರಿಸಬೇಕೆಂದು ನವೆಂಬರ್ 18ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.