ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು (ಸೋಮವಾರ) ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜುಲೈ 12ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲು ನ್ಯಾಯಾಲಯ ಶನಿವಾರ (ಜೂನ್ 29) ಆದೇಶಿಸಿತ್ತು.

ಮೂರು ದಿನಗಳ ಕಸ್ಟಡಿ ವಿಚಾರಣಾ ಅವಧಿ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಅವರ ಮುಂದೆ ಹಾಜರುಪಡಿಸಲಾಗಿತ್ತು.

ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿಯಲ್ಲಿ ಕೋರಿತ್ತು. ಸಿಬಿಐ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಧೀಶರು, ಅವರಿಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಅರವಿಂದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.
.ದೆಹಲಿ | ಕೇಜ್ರಿವಾಲ್ ಬಿಡುಗಡೆಗೆ ಒತ್ತಾಯ; ಬಿಜೆಪಿ ಕಚೇರಿ ಬಳಿ AAP ಪ್ರತಿಭಟನೆ.ಎಷ್ಟೇ ಕಿರುಕುಳ ನೀಡಿದರೂ ಕೇಜ್ರಿವಾಲ್ ತಲೆ ಬಾಗಲ್ಲ: ಭಗವಂತ್ ಮಾನ್.ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ಗೆ ಜುಲೈ 12ರ ವರೆಗೆ ನ್ಯಾಯಾಂಗ ಬಂಧನ.ಕೇಜ್ರಿವಾಲ್ಗೆ ಮತ್ತೊಂದು ಆಘಾತ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಿದ ಸಿಬಿಐ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.