ನವದೆಹಲಿ: ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಮತ್ತು ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರ ಹೇಳಿಕೆಯನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
.ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.