ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾಮೀನಿಗೆ ಹೈಕೋರ್ಟ್ ತಡೆ; ಸುಪ್ರೀಂಕೋರ್ಟ್‌ಗೆ ಕೇಜ್ರಿವಾಲ್ ಮೊರೆ

Published 23 ಜೂನ್ 2024, 16:13 IST
Last Updated 23 ಜೂನ್ 2024, 16:13 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತಮಗೆ ಮಂಜೂರು ಮಾಡಿದ ಜಾಮೀನಿನ ಮೇಲೆ ಮಧ್ಯಂತರ ತಡೆ ಹೇರಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ. 

ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕಾರ ಕೇಜ್ರಿವಾಲ್ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಆದರೆ, ಕೇಜ್ರಿವಾಲ್ ಅವರ ಬಿಡುಗಡೆ ಪ್ರಶ್ನಿಸಿ, ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ರಜಾಕಾಲದ ಪೀಠವು, ಕೇಜ್ರಿವಾಲ್ ಅವರ ಬಿಡುಗಡೆಗೆ ತಡೆ ಹೇರಿತ್ತು.

ಈ ಕುರಿತು ಎರಡೂ ಪಕ್ಷಗಳು ಜೂನ್ 24ರ ಒಳಗಾಗಿ ತಮ್ಮ ಅಭಿಪ್ರಾಯ ತಿಳಿಸಬೇಕು. ಅಲ್ಲಿಯವರೆಗೆ ವಿಚಾರಣಾ ನ್ಯಾಯಾಲಯದ ಆದೇಶದ ಮೇಲೆ ತಡೆ ಮುಂದುವರಿಯಲಿದೆ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT