ದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಬೆನ್ನುನೋವಿಗೆ 21 ದಿನ ‘ಪಂಚಕರ್ಮ ಥೆರಪಿ’ ಅಗತ್ಯವಿದೆ ಎಂದು ಆಯುರ್ವೇದ ವೈದ್ಯರು ತಮ್ಮ ಕುಟುಂಬಕ್ಕೆ ತಿಳಿಸಿದ್ದಾರೆ. ಇದಕ್ಕಾಗಿ ಆಯುರ್ವೇದ ಕೇಂದ್ರಕ್ಕೆ ದಾಖಲಾಗಬೇಕಿದ್ದು, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಕೋರಿ ಪಿಳ್ಳೈ ಅವರು ನ್ಯಾಯಾಲಯದ ಮೊರೆಹೋಗಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ನ ರಜಾಕಾಲದ ಪೀಠವು, ‘ಪಿಳ್ಳೈ ಅವರು ಜೀವಕ್ಕೆ ಅಪಾಯ ತರುವಂಥ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬುದಾಗಿ ಯಾವುದೇ ವೈದ್ಯಕೀಯ ವರದಿಯಲ್ಲಿ ಉಲ್ಲೇಖವಿಲ್ಲ. ಜೊತೆಗೆ ಅವರ ಕಾಯಿಲೆಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿಲ್ಲ ಎಂಬ ಸ್ಥಿತಿಯೂ ಇಲ್ಲ’ ಎಂದು ಪ್ರತಿಪಾದಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.