ನವದೆಹಲಿ: ಸಮಾಜವಾದಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ (ಮರಣೋತ್ತರ) ಘೋಷಿಸಲಾಗಿದೆ.

ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ‘ಸಾಮಾಜಿಕ ನ್ಯಾಯ’ದ ಅಸ್ತ್ರಕ್ಕೆ ಪ್ರತ್ಯುತ್ತರ ನೀಡುವ ಪ್ರಯತ್ನದ ಭಾಗವಾಗಿ ನರೇಂದ್ರ ಮೋದಿ ಸರ್ಕಾರವು ಕರ್ಪೂರಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಿದೆ ಎಂದು ವಿಶ್ಲೇಷಿಸಲಾಗಿದೆ. ಅದೇ ರೀತಿ, ಲೋಕಸಭೆ ಚುನಾವಣೆಗೂ ಮುನ್ನ ಅತ್ಯಂತ ಹಿಂದುಳಿದ ವರ್ಗಗಳನ್ನು ಓಲೈಸುವ ತಂತ್ರಗಾರಿಕೆಯೂ ಇದರ ಹಿಂದೆ ಅಡಗಿದೆ ಎನ್ನಲಾಗಿದೆ.

ಕರ್ಪೂರಿ ಅವರ ಜನ್ಮಶತಮಾನೋತ್ಸವಕ್ಕೆ ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಈ ಘೋಷಣೆ ಮಾಡಿದರು. ‘ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಸಂತಸವಾಗುತ್ತಿದೆ’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಸಮಾಜದ ದುರ್ಬಲ ವರ್ಗದವರ ಏಳಿಗೆಗಾಗಿ ಕರ್ಪೂರಿ ಠಾಕೂರ್ ನಡೆಸಿದ್ದ ನಿರಂತರ ಪ್ರಯತ್ನಗಳಿಗೆ ಭಾರತ ರತ್ನ ಗೌರವವು ಪ್ರಮಾಣಪತ್ರವಾಗಿದೆ.
–ನರೇಂದ್ರ ಮೋದಿ, ಪ್ರಧಾನಿ

1970ರ ದಶಕದ ಕೊನೆಯಲ್ಲಿ ಮುಂಗೇರಿ ಲಾಲ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಮೂಲಕ ಸರ್ಕಾರಿ ಉದ್ಯೋಗದಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಪ್ರಯತ್ನವನ್ನು ಕರ್ಪೂರಿ ಮಾಡಿದ್ದರು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಈ ಅಚ್ಚರಿಯ ಆಯ್ಕೆ ನಡೆದಿದೆ. ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯದ ವಿಷಯವನ್ನು ಅದರಲ್ಲೂ ಮುಖ್ಯವಾಗಿ ಜಾತಿ ಗಣತಿಯನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು 1952ರಲ್ಲಿ ಸಮಾಜವಾದಿ ಪಕ್ಷದ ಶಾಸಕರಾಗಿ ಬಿಹಾರ ವಿಧಾನಸಭೆ ಪ್ರವೇಶಿಸಿದ್ದರು. ಚುನಾವಣೆಯಲ್ಲಿ ಒಮ್ಮೆಯೂ ಸೋಲದ ಅವರು ಉಪಮುಖ್ಯಮಂತ್ರಿ ಹುದ್ದೆಗೇರಿ ದರಲ್ಲದೆ, ಬಿಹಾರದ ಮೊದಲ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯೂ ಆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.