ನವದೆಹಲಿ: ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
.ಬರ ಪರಿಹಾರ ಕೋರಿ ರಾಜ್ಯ ಸರ್ಕಾರದ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್.
ಈ ಬಗ್ಗೆ ಲೈವ್ ಲಾ ವರದಿ ಮಾಡಿದೆ.

ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದಕ್ಕೆ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ಹೇಳಿದರು.
.ಬರ ಪರಿಹಾರ: ಅನ್ಯಾಯ ಒಪ್ಪಿಕೊಂಡ ನಿರ್ಮಲಾ- ಡಿಕೆಶಿ.
ಈ ಸಂಬಂಧ ಚುನಾವಣಾ ಆಯೋಗ ಒಪ್ಪಿಗೆ ನೀಡಿದ್ದರಿಂದ ಹೆಚ್ಚಿನ ವಾದ ಅಗತ್ಯವಿಲ್ಲ. ಅಗತ್ಯವಾದ ಕ್ರಮವನ್ನು ಶೀಘ್ರವೇ ತೆಗೆದುಕೊಳ್ಳಲಾಗುವುದು ಎಂದು ಪೀಠಕ್ಕೆ ತಿಳಿಸಿದ ಅವರು, ಸೋಮವಾರಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿಕೊಂಡರು. ಅಲ್ಲದೆ ಆ ವೇಳೆಗೆ ‘ಏನಾದರೊಂದು ಆಗಬಹುದು’ ಎಂದು ಎ.ಜಿ ಹೇಳಿದರು.

ಎ.ಜಿ ತೋರಿಸಿದ ವಿಶ್ವಾಸದ ಹಿನ್ನೆಲೆಯಲ್ಲಿ ಮುಂದೂಡಲು ಯಾವುದೇ ಸಮಸ್ಯೆ ಇಲ್ಲ ಎಂದು ಕರ್ನಾಟಕದ ಪರ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದರು.
.ಬರ ಪರಿಹಾರ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ: ನಿರ್ಮಲಾ ಸೀತಾರಾಮನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.