ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿ ಪಟ್ಟಣ ವ್ಯಾಪ್ತಿಯ ಮುಂಡಕ್ಕೈ ಗ್ರಾಮದಲ್ಲಿ ಇಂದು (ಬುಧವಾರ) ಮುಂಜಾನೆ ರಕ್ಷಣಾ ಕಾರ್ಯಾಚರಣೆ ಪುನಾರಾರಂಭಗೊಂಡಿದ್ದು, ಮನೆಯೊಳಗೆ ಜನರು ಕುಳಿತಿರುವ ಅಥವಾ ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿರುವ ದೃಶ್ಯಗಳು ಭೂಕುಸಿತದ ಭೀಕರತೆಗೆ ಸಾಕ್ಷಿಯಾಗಿದೆ.
.ವಯನಾಡು ಭೂಕುಸಿತ: ನಾಪತ್ತೆಯಾದವರ ಮಾಹಿತಿ ಸಂಗ್ರಹ ಕಾರ್ಯ ಆರಂಭಿಸಿದ ಜಿಲ್ಲಾಡಳಿತ.Wayanad Landslide | ಭೂಕುಸಿತ: ವಿಜ್ಞಾನಿಗಳು ಹೇಳುವುದೇನು?.
ಒಂದು ಸ್ಥಳದಲ್ಲಿ ಸಂಪೂರ್ಣವಾಗಿ ಮಣ್ಣಿನಡಿ ಹೂತು ಹೋಗಿದ್ದ ಮನೆಯ ಮೇಲ್ಛಾವಣೆಯನ್ನು ಮುರಿದು ಒಳಗೆ ಪ್ರವೇಶಿಸಿಸಲು ಸೇನೆ ಸಿಬ್ಬಂದಿ ಹಗ್ಗಗಳನ್ನು ಬಳಸಿದ್ದಾರೆ. ಮಣ್ಣಿನಡಿ ಸಿಲುಕಿಕೊಂಡಿದ್ದ ಶವಗಳನ್ನು ಹೊರತೆಗೆಯಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕುರ್ಚಿಗಳ ಮೇಲೆಯೇ ಕುಳಿತಿರುವ ಹಾಗೂ ಮಂಚಗಳ ಮೇಲೆಯೇ ಮಲಗಿರುವ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಇದು ನರಕದ ನೋಟದಂತೆ ಭಾಸವಾಗಿತ್ತು ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿದ್ದಾರೆ.
.Wayanad Landslide | ವಯನಾಡ್ನಲ್ಲಿ ಮರಣ ಮೃದಂಗ.ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರಿ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್.
ಆದರೆ ಅಧಿಕಾರಿಗಳು ಈ ಬಗ್ಗೆ ಅಧಿಕೃತವಾಗಿ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಕೆಲವೆಡೆ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದು ಬಂದಿದೆ.

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ನಸುಕಿನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಏರುವ ಅಪಾಯವಿದೆ.
.ವಯನಾಡಿಗೆ ರಾಹುಲ್, ಪ್ರಿಯಾಂಕಾ ಭೇಟಿ ಮುಂದೂಡಿಕೆ.ರಾಜ್ಯದ ದೊಡ್ಡತಪ್ಪಲೆಯಲ್ಲಿ ಮತ್ತೆ ಭೂಕುಸಿತ.
ಉತ್ತರ ಕೇರಳದ ಗುಡ್ಡಗಾಡು ಜಿಲ್ಲೆಯಾಗಿದ್ದು, 2011 ರ ಜನಗಣತಿಯ ಪ್ರಕಾರ ಸುಮಾರು 8,17,000 ಜನಸಂಖ್ಯೆಯನ್ನು ಹೊಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.