ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣ ವಿಧಾನಸಭೆ ಚುನಾವಣೆ: ಬಿಜೆಪಿಗೆ ಬಂಡಾಯದ ಬಿಸಿ

ಸಚಿವ, ಶಾಸಕ ರಾಜೀನಾಮೆ * ಪಕ್ಷೇತರರಾಗಿ ರಂಜಿತ್ ಚೌಟಾಲಾ ಸ್ಪರ್ಧೆ, ‘ಕೈ’ಹಿಡಿಯಲು ನಾಪಾ ನಿರ್ಧಾರ
Published : 5 ಸೆಪ್ಟೆಂಬರ್ 2024, 15:28 IST
Last Updated : 5 ಸೆಪ್ಟೆಂಬರ್ 2024, 15:28 IST
ಫಾಲೋ ಮಾಡಿ
Comments

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ 67 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿಗೆ ಬಂಡಾಯ ಎದುರಾಗಿದೆ. ಟಿಕೆಟ್‌ ವಂಚಿತ ಸಚಿವ ರಂಜಿತ್‌ ಸಿಂಗ್ ಚೌಟಾಲಾ, ಶಾಸಕ ಲಕ್ಷ್ಮಣ್ ದಾಸ್‌ ನಾಪಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಪ್ರಧಾನಿ ದೇವಿಲಾಲ್‌ ಅವರ ಪುತ್ರರೂ ಆದ ಚೌಟಾಲಾ, ಬೆಂಬಲಿಗರ ಸಭೆಯ ಬಳಿಕ, ‘ನಾನು ಚೌಧರಿ ದೇವಿಲಾಲ್‌ ಅವರ ಪುತ್ರ. ಅದೇ ವರ್ಚಸ್ಸಿದೆ. ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ’ ಎಂದು ಪ್ರಕಟಿಸಿದರು.  

ಇವರು ರಾನಿಯಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ, ಪಕ್ಷ ಆ ಕ್ಷೇತ್ರಕ್ಕೆ ಶಿಶ್‌ಪಾಲ್ ಕಾಂಬೋಜ್‌ರನ್ನು ಆಯ್ಕೆ ಮಾಡಿದೆ.

ಟಿಕೆಟ್‌ ನಿರಾಕರಣೆಗೆ ಪ್ರತಿಭಟನೆಯಾಗಿ ರಾಜೀನಾಮೆ ಸಲ್ಲಿಸಿರುವ ನಾಪಾ, ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಬಳಿಕ, ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದರು.

ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ, ಮಾಜಿ ಸಚಿವ ಕರಣ್‌ ದೇವ್‌ ಕಾಂಬೋಜ್ ಅವರು ಟಿಕೆಟ್ ಹಂಚಿಕೆಯಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಎಂದು ದೂರಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ರಾನಿಯಾ ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿದ್ದ ರಂಜಿತ್ ಚೌಟಾಲಾ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ಹಿಸ್ಸಾರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಪರಾಭವಗೊಂಡಿದ್ದರು.

67 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಬಿಜೆಪಿ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಸಚಿವ ಸಂಜಯ್‌ ಸಿಂಗ್, ಮಾಜಿ ಸಚಿವ ಸಂದೀಪ್‌ ಸಿಂಗ್ ಸೇರಿದಂತೆ ಕೆಲ ಶಾಸಕರ ಹೆಸರು ಇಲ್ಲ.

ಮೊದಲ ಪಟ್ಟಿಯಲ್ಲಿ ಪ್ರಕಟಿಸಿರುವಂತೆ ಬಿಜೆಇಪಯು ಮಾಜಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನನ್ನು ಲಾಡ್ವಾ ಕ್ಷೇತ್ರದಿಂದ ಕಣಕ್ಕಿಳಿಸಲಿದೆ. ಸದ್ಯ ಅವರು ಕಾರ್ನಲ್ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ಪಕ್ಷ ಸೇರಿದ್ದ ಹಲವರಿಗೂ ಟಿಕೆಟ್ ನೀಡಲಾಗಿದೆ.

ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ತೀವ್ರ ಸ್ಪರ್ಧೆ ಎದುರಿಸುತ್ತಿದೆ. ಹಲವು ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT