ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ರಾಟಿಯಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲು ನಿರಾಕರಿಸಿದ್ದಕ್ಕೆ ಆಡಳಿತರೂಢ ಬಿಜೆಪಿ ಶಾಸಕ ಲಕ್ಷ್ಮಣ್ ದಾಸ್ ನಾಪಾ ಪಕ್ಷ ತೊರೆದಿದ್ದಾರೆ.

ಬಿಜೆಪಿಯು ಚುನಾವಣೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ಅವರಿಗೆ ಪತ್ರ ಬರೆದಿರುವ ನಾಪಾ, ತಾನು ಪಕ್ಷವನ್ನು ತ್ಯಜಿಸುವುದಾಗಿ ಮತ್ತು ಅದರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ರಾಟಿಯ ಕ್ಷೇತ್ರದಿಂದ ಸಿರ್ಸಾದ ಮಾಜಿ ಸಂಸದೆ ಸುನೀತಾ ದುಗ್ಗಲ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಬಿಜೆಪಿ ಬುಧವಾರ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಕರ್ನಾಲ್ನಿಂದ ಹಾಲಿ ಶಾಸಕ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಲಾಡ್ವಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಅಲ್ಲದೆ ಇತ್ತೀಚೆಗೆ ಪಕ್ಷ ಸೇರಿದ ಹಲವು ಹೊಸ ಮುಖಗಳಿಗೆ ಪಕ್ಷವು ಮಣೆ ಹಾಕಿದೆ.

ರಾಟಿಯಾ ಎಸ್ಸಿ ಅಭ್ಯರ್ಥಿಗೆ ಮೀಸಲಾಗಿರುವ ಕ್ಷೇತ್ರವಾಗಿದ್ದು, 2019ರ ವಿಧಾನಸಭಾ ಚುನಾವಣೆಯಲ್ಲಿ ನಾಪಾ 50 ಸಾವಿರಕ್ಕೂ ಹೆಚ್ಚು ಮತ ಗಳಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಆಕ್ಷಾಂಕಿಯಾಗಿದ್ದ ನಾಪಾ ಟಿಕೆಟ್ ಸಿಗದ್ದಕ್ಕೆ ಅಸಮಧಾನ ಹೊರಹಾಕಿ ಪಕ್ಷ ತೊರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.