ಹೈದರಾಬಾದ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಹೈದರಾಬಾದ್ ನಗರ ಸೇರಿದಂತೆ ತೆಲಂಗಾಣದ ಹಲವೆಡೆ ಭಾನುವಾರವೂ ಭಾರಿ ಮಳೆ ಮುಂದುವರಿದಿದ್ದು, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಸಚಿವರು, ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ.

ಮಳೆ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ ರೇವಂತ್ ರೆಡ್ಡಿ ಅವರು ಸಚಿವರಾದ ಭಟ್ಟಿ ವಿಕ್ರಮಾರ್ಕ, ಎನ್. ಉತ್ತಮ್ ಕುಮಾರ್ ರೆಡ್ಡಿ, ತುಮ್ಮಲ ನಾಗೇಶ್ವರ ರಾವ್, ದಾಮೋದರ ರಾಜ ನರಸಿಂಹ ಮತ್ತು ಜೂಪಲ್ಲಿ ಕೃಷ್ಣರಾವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಆದಿಲಾಬಾದ್, ನಿಜಾಮಾಬಾದ್, ಕಾಮರೆಡ್ಡಿ, ಮಹಬೂಬ್ನಗರ, ನಾಗರಕರ್ನೂಲ್, ವನಪರ್ತಿ, ನಾರಾಯಣಪೇಟೆ, ಜೋಗುಲಾಂಬ ಗದ್ವಾಲ್, ಮಹಬೂಬಾಬಾದ್, ಜನಾಂವ್ ಜಿಲ್ಲೆಗಳಲ್ಲಿ ಸೆ 2ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ.

ಮಳೆಯಿಂದಾಗಿ ಮಹಬೂಬಾಬಾದ್ ಜಿಲ್ಲೆಯಲ್ಲಿ ರೈಲು ಹಳಿಗಳ ಮೇಲೆ ನೀರು ನಿಂತಿದ್ದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವೆಡೆ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಹೈದರಾಬಾದ್ ನಗರದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಶನಿವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ.

ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ತಂಡಗಳು ಹೆಲಿಕಾಪ್ಟರ್ ಮೂಲಕ 28 ಜನರನ್ನು ರಕ್ಷಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.