ಭೋಪಾಲ್: ಮಧ್ಯ ಪ್ರದೇಶ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳನ್ನು ಹೊಂದಿರುವ ‘ಸಾತ್ಪುರ ಭವನ’ದ ಮೂರನೇ ಮಹಡಿಯಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ನಂದಿಸುವ ಕಾರ್ಯ ಮಧ್ಯರಾತ್ರಿವರೆಗೂ ಮುಂದುವರಿದಿತ್ತು.

ಸೇನೆ, ಭಾರತೀಯ ವಿಮಾನ ಪ್ರಾಧಿಕಾರ (ಎಎಐ), ತೈಲ ಕಂಪನಿಗಳೂ ಸೇರಿದಂತೆ ವಿವಿಧೆಡೆಯಿಂದ ಅಗ್ನಿಶಾಮಕ ವಾಹನಗಳನ್ನು ಕರೆಸಿ ಅಗ್ನಿ ನಂದಿಸುವ ಕಾರ್ಯ ನಡೆದಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸಂಜೆ 4 ಗಂಟೆ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವು ನೋವಿನ ವರದಿಯಾಗಿಲ್ಲ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದು, ಬೆಂಕಿ ನಂದಿಸಲು ನೆರವು ಕೋರಿದ್ದಾರೆ. ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಸಿಎಂಒ ಕಚೇರಿ ತಿಳಿಸಿದೆ.

ಭಾರತೀಯ ವಾಯುಪಡೆಯ ವಿಮಾನ ಎಎನ್–52 ಮತ್ತು ಎಂಐ–15 ಹೆಲಿಕಾಪ್ಟರ್‌ಗಳು ರಾತ್ರಿ, ಕಟ್ಟಡದ ಮೇಲೆ ನೀರು ಸುರಿಯುವ ಮೂಲಕ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಲಿವೆ ಎಂದು ಸಿಎಂಒ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.