ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದರ ಅಮಾನತು | ನಾಳೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಖರ್ಗೆ

Published 21 ಡಿಸೆಂಬರ್ 2023, 6:38 IST
Last Updated 21 ಡಿಸೆಂಬರ್ 2023, 6:38 IST
ಅಕ್ಷರ ಗಾತ್ರ

ನವದೆಹಲಿ: ಸಂಸದರನ್ನು ಅಮಾನತಿನಲ್ಲಿ ಇರಿಸಿರುವುದನ್ನು ಖಂಡಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ನಾಯಕರು ಶುಕ್ರವಾರ (ನಾಳೆ) ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದೇ ವೇಳೆ ರಾಷ್ಟ್ರವ್ಯಾಪಿ ಪ್ರತಿಭಟನೆಗೂ ಕರೆ ನೀಡಿದೆ.

143 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಇಂದೂ ಕೂಡ ಪ್ರತಿಭಟನೆ ನಡೆಸಿದೆ.

ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗೆ ರ‍್ಯಾಲಿ ನಡೆಸಿದ ವಿರೋಧ ಪಕ್ಷದ ಸಂಸದರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಬೇರೆ ಎಲ್ಲಿಯೋ ಮಾತನಾಡಿದ್ದಾರೆ. ಆದರೆ ಸಂಸತ್ತಿನಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂದು ಟೀಕಿಸಿದ್ದಾರೆ.

ಸಂಸತ್ ಭದ್ರತಾ ಉಲ್ಲಂಘನೆಯಂತಹ ಗಂಭೀರ ವಿಚಾರಗಳನ್ನು ನಾವು ಪ್ರಶ್ನೆ ಮಾಡಿದ್ದೇವೆ. ಪ್ರಧಾನಿ ಹಾಗೂ ಗೃಹ ಸಚಿವರು ಇದಕ್ಕೆ ಸಮಗ್ರ ವಿವರಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT