ಜಮ್ಮು: ಭಯೋತ್ಪಾದನೆ ಕೊನೆಗೊಳ್ಳುವವರೆಗೆ ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಅವರು, ಉಗ್ರ ಚಟುವಟಿಕೆಗಳ ವಿಚಾರವಾಗಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

'ಮಾತುಕತೆ ಮತ್ತು ಬಾಂಬ್ ದಾಳಿಗಳು ಒಟ್ಟಿಗೆ ನಡೆಯಲು ಸಾಧ್ಯವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದೊಂದಿಗೆ ಮಾತುಕತೆ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ವಾಣಿಜ್ಯ ಚಟುವಟಿಕೆಯನ್ನು ಪುನರಾರಂಭಿಸಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾ, 'ಭಯೋತ್ಪಾದನೆ ಅಂತ್ಯವಾಗುವವರೆಗೆ ಪಾಕಿಸ್ತಾನದ ಜೊತೆ ಮಾತುಕತೆ ನಡೆಸುವ ಇಚ್ಛೆಯನ್ನು ನಾವು ಹೊಂದಿಲ್ಲ. ಆದರೆ, ಕಾಶ್ಮೀರದ ಯುವಕರೊಂದಿಗೆ ಖಂಡಿತಾ ಮಾತುಕತೆ ನಡೆಸುತ್ತೇವೆ' ಎಂದು ತಿಳಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮತ್ತು ಕಾಂಗ್ರೆಸ್ ಪಕ್ಷ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು ಎಂಬ ಬೇಡಿಕೆ ಇಟ್ಟಿರುವ ಕುರಿತು, 'ಜನರ ದಿಕ್ಕು ತಪ್ಪಿಸುವುದಕ್ಕಾಗಿ ಇಂತಹ ಬೇಡಿಕೆಗಳನ್ನು ಇಡಲಾಗುತ್ತಿದೆ' ಎಂದು ಗೃಹ ಸಚಿವ ದೂರಿದ್ದಾರೆ.

'ಜಮ್ಮು ಮತ್ತು ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನ ಮರಳಿಸಲಾಗುವುದು' ಎಂದು ತಿಳಿಸಿದ್ದಾರೆ.
.ಉಗ್ರಗಾಮಿಗಳ ತಾಣವಾಗಿದ್ದ ಕಾಶ್ಮೀರ ಈಗ ಪ್ರವಾಸೋದ್ಯಮದ ತಾಣವಾಗಿದೆ: ಅಮಿತ್ ಶಾ.ಸಂವಿಧಾನದ 370ನೇ ವಿಧಿ ಈಗ ಇತಿಹಾಸ, ಅದು ಮತ್ತೆಂದೂ ಮರುಕಳಿಸುವುದಿಲ್ಲ: ಅಮಿತ್ ಶಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.