ನವದೆಹಲಿ: ನೀಟ್ ಅಕ್ರಮ ಕುರಿತಂತೆ ಆಡಳಿತ ಮತ್ತು ವಿಪಕ್ಷಗಳ ನಡುವೆ ಲೋಕಸಭೆಯಲ್ಲಿ ಮಾತಿನ ಚಕಮಕಿ ಮತ್ತು ಗದ್ದಲದ ನಡುವೆ ಸದನವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೈಕ್ ಸ್ವಿಚ್ ಆಫ್ ಮಾಡಿದ ಹಿನ್ನೆಲೆಯಲ್ಲಿ ಗದ್ದಲ ಏರ್ಪಟ್ಟಿತು ಎಂದಿದ್ದಾರೆ.

ದೇಶದಲ್ಲಿ ನಿರಂತರ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಲಾಗುತ್ತಿದೆ. ಹರಿಯಾಣದಲ್ಲಿ ಗರಿಷ್ಠ ಪ್ರಮಾಣದ ಪ್ರಶ್ನೆಪತ್ರಿಕೆ ಸೋರಿಕೆ ಆಗಿವೆ. ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ. ನಾವು ಈ ವಿಷಯದ ಕುರಿತು ಚರ್ಚೆಗೆ ಮುಂದಾದರೆ ಮೈಕ್ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತಿದೆ. ವಿರೋಧ ಪಕ್ಷದ ನಾಯಕರ ಮೈಕ್ ಆಫ್ ಮಾಡಿದರೆ ಸಂಸದರಿಗೆ ಕೋಪ ಬರುತ್ತದೆ. ಇಂದು ಅದೇ ಆಯಿತು’ಎಂದಿದ್ದಾರೆ.

ಸದನದ ಇತರೆ ಎಲ್ಲ ಪ್ರಕ್ರಿಯೆಗಳನ್ನು ಅಮಾನತಿನಲ್ಲಿಟ್ಟು ನೀಟ್ ಅಕ್ರಮ ಕುರಿತಂತೆ ತುರ್ತು ಚರ್ಚೆಗೆ ಶುಕ್ರವಾರ ಪ್ರತಿಪಕ್ಷ ಕಾಂಗ್ರೆಸ್ ನಿಲುವಳಿ ಮಂಡಿಸಿತು. ಇದನ್ನು ತಿರಸ್ಕರಿಸಿದ ಸ್ಪೀಕರ್ ಓಂ ಬಿರ್ಲಾ, ಸದನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಿಗದಿಯಾಗಿದೆ ಎಂದು ಹೇಳಿದರು. ಇದರಿಂದ ಅಸಮಾಧಾನಗೊಡ ವಿಪಕ್ಷಗಳ ಸದಸ್ಯರು ಗದ್ದಲ ಎಬ್ಬಿಸಿದರು.

ಸದನ ಮುಂದೂಡಿಕೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸದನದ ಕಲಾಪ ನಡೆಯುವುದು ಕಾಂಗ್ರೆಸ್ಗೆ ಬೇಕಿಲ್ಲ ಎಂದು ಹೇಳಿದರು.

‘ಸರ್ಕಾರದ ಕಡೆಯಿಂದ ನಾವು ಸ್ಪಷ್ಟವಾಗಿದ್ದೇವೆ. ವಿಪಕ್ಷಗಳು ಎತ್ತಿರುವ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡುವುದಾಗಿ ಹೇಳಿದ್ದೇವೆ. ಚರ್ಚೆಗೂ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದೇವೆ. ಆದರೆ, ಕಲಾಪಕ್ಕೆ ಅಡ್ಡಿಪಡಿಸುವ ಪ್ರವೃತ್ತಿಯನ್ನು ಕಾಂಗ್ರೆಸ್ ರೂಢಿಸಿಕೊಂಡಿದೆ. ಇದನ್ನು ನಾನು ಖಂಡಿಸುತ್ತೇನೆ. ಅಂತಹ ಘಟನೆ ಮತ್ತೆ ನಡೆಯಬಾರದು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.