ಅಮರಾವತಿ (ಆಂಧ್ರ ಪ್ರದೇಶ): ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದವೈಎಸ್ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ಗುಂಟೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ‘ಜಗನ್ ಸರ್ಕಾರ ಪತನವಾಗಲಿದೆ‘ಎಂದು ಹೇಳಿದರು.

ಜನಸೇನಾ ಪಕ್ಷದ ಬೆಂಬಲಿಗರ ಮನೆಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿದ ಪವನ್ ಕಲ್ಯಾಣ್, ಈ ಧ್ವಂಸದಿಂದಲೇ ಸರ್ಕಾರದ ಪತನವು ಆರಂಭವಾಗಿದೆ. ಈ ಸರ್ಕಾರ ಬಹಳ ದಿನಗಳವರೆಗೆ ಇರುವುದಿಲ್ಲ ಎಂದು ಗುಡುಗಿದ್ದಾರೆ.

ಗ್ರಾಮದಲ್ಲಿ ಒತ್ತುವರಿ ನೆಪದಲ್ಲಿ ಯಾವುದೇ ನೋಟಿಸ್ ನೀಡದೆ ಮನೆಗಳನ್ನು ಧ್ವಂಸ ಮಾಡಲಾಗಿದೆ. ಬಹುಪಾಲು ಮನೆಗಳು ಜನಾಸೇನಾ ಪಕ್ಷದ ಬೆಂಬಲಿಗರ ಮನೆಗಳು ಎಂದು ವರದಿಯಾಗಿದೆ.

ಶನಿವಾರ ಸಂಜೆ ಪವನ್ ಕಲ್ಯಾಣ್ ಇಪ್ಪತಂ ಗ್ರಾಮಕ್ಕೆ ಭೇಟಿ ನೀಡುವ ಸಾಧ್ಯತೆಗಳಿಗೆ. ಆದರೆ ಅವರ ಭೇಟಿಗೆ ಸ್ಥಳೀಯಾಡಳಿತದಿಂದ ಒಪ್ಪಿಗೆ ದೊರೆತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.