ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಬಹುತೇಕ ಅಂತ್ಯಗೊಂಡಿದ್ದು, 31 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಜಯ ಸಾಧಿಸಿದೆ. 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪ್ರತಿಪಕ್ಷ ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 14 ಕ್ಷೇತ್ರಗಳನ್ನು ಗೆದ್ದಿದೆ.

ಉಳಿದಂತೆ ಸಿಪಿಐ(ಎಂಎಲ್) (ಎಲ್), ಎಲ್ಜೆಪಿಆರ್ವಿ, ಜೆಎಲ್ಕೆಎಮ್ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದುಕೊಂಡಿವೆ.

ನ. 13ರಂದು ಜಾರ್ಖಂಡ್ನ 43 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು. ಜಾರ್ಖಂಡ್ನ ಎರಡನೇ ಹಂತದಲ್ಲಿ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆದಿತ್ತು.

ಜಾರ್ಖಂಡ್ ಚುನಾವಣಾ ಫಲಿತಾಂಶದ ಹೈಲೈಟ್ಸ್...

ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ 51 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಜೆಪಿ ನೇತೃತ್ವದ ‘ಎನ್ಡಿಎ’ ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

81 ಸದಸ್ಯಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರಕ್ಕೆ 41 ಶಾಸಕರ ಅಗತ್ಯವಿದೆ.

ಬರ್ಹೈತ್ ಕ್ಷೇತ್ರದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ, ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಬಿಜೆಪಿ ಅಭ್ಯರ್ಥಿ ಗಮಾಲಿಯೆಲ್ ಹೆಂಬ್ರಮ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಹೇಮಂತ್ ಸೊರೇನ್ ಅವರ ಪತ್ನಿ, ಕಲ್ಪನಾ ಸೊರೇನ್ ಅವರು ಗಾಂಡೇಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಯಾ ದೇವಿ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಚಂಪೈ ಸೊರೇನ್ ಅವರು ಸರೈಕೆಲಾ ಕ್ಷೇತ್ರದಲ್ಲಿ 26 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಅಭ್ಯರ್ಥಿಗಳು ಸ್ಪರ್ಧಿಸಿದ್ದ ಆರು ಸ್ಥಾನಗಳ ಪೈಕಿ ಐದರಲ್ಲಿ ಮುನ್ನಡೆ ಸಾಧಿಸಿರುವುದು ವಿಶೇಷ.

ಜಾರ್ಖಂಡ್ನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ, ಜೆಎಂಎಂ ಮುಂದಾಳತ್ವದ ‘ಇಂಡಿಯಾ’ ಮೈತ್ರಿಕೂಟ ಮತ್ತೆ ಅಧಿಕಾರದ ಗದ್ದುಗೆ ಏರುವುದನ್ನು ತಡೆಯುವ ವಿಶ್ವಾಸದಲ್ಲಿದೆ.

‘ಇಂಡಿಯಾ’ ಮೈತ್ರಿಕೂಟ ಮತ್ತೆ ಅಧಿಕಾರ ಬರುವ ಸಾಧ್ಯತೆಗಳು ಕ್ಷೀಣ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಒಂದು ವೇಳೆ, ಬಹುಮತ ಪಡೆದಲ್ಲಿ, ಜೆಎಂಎಂ ನಾಯಕ ಹೇಮಂತ್ ಸೊರೇನ್ 2ನೇ ಅವಧಿಗೆ ಮುಖ್ಯಮಂತ್ರಿಯಾಗುವರು ಎನ್ನಲಾಗುತ್ತಿದೆ.

ಒಂದು ವೇಳೆ, ಎನ್ಡಿಎಗೆ ಬಹುಮತ ಸಿಕ್ಕಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಬಿಜೆಪಿ ಬಹಿರಂಗಪಡಿಸಿಲ್ಲ.

ಜನಾದೇಶ ತಮ್ಮ ಪರವಾಗಿಯೇ ಇರಲಿದೆ ಎಂದು ಎನ್ಡಿಎ ಹಾಗೂ ‘ಇಂಡಿಯಾ’ ಒಕ್ಕೂಟ ಎರಡೂ ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಸೋಮವಾರದಿಂದ ಆರಂಭವಾಗಲಿರುವ ಸಂಸತ್ನ ಚಳಿಗಾಲದ ಅಧಿವೇಶನದ ಮೇಲೂ ಈ ಫಲಿತಾಂಶವು ಪ್ರಭಾವ ಬೀರುವ ನಿರೀಕ್ಷೆ ಇದೆ.

ಜಾರ್ಖಂಡ್ ವಿಧಾನಸಭೆಯ ಒಟ್ಟು 81 ಕ್ಷೇತ್ರಗಳ ಪೈಕಿ 68 ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದವುಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಲಿದೆ.

.ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಫಲಿತಾಂಶ: ಯಾವ ಸಮೀಕ್ಷೆಗಳು ಏನು ಹೇಳಿದ್ದವು?.Maharashtra | ನಾನು ಆಧುನಿಕ ಅಭಿಮನ್ಯು.. ಚಕ್ರವ್ಯೂಹ ಭೇದಿಸಿದ್ದೇನೆ: ಫಡಣವೀಸ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.