ಕೋಲ್ಕತ್ತ: ಕೋಲ್ಕತ್ತದ ಆರ್.ಜಿ ಕರ್ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವೈದ್ಯಕೀಯ ವಿದ್ಯಾರ್ಥಿಯನ್ನು ತ್ವರಿತವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದರು ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
.ಕೋಲ್ಕತ್ತ: ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸುವಂತೆ ವಕೀಲರ ಪ್ರತಿಭಟನೆ.
ಆರ್.ಜಿ ಕರ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿ ಅವರು, ಘಟನೆ ಬೆಳಕಿಗೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಂಚದ ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾರೆ.

‘ಪೊಲೀಸರು ಆರಂಭದಿಂದಲೇ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದರು. ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವಾಗಲೂ ಮೃತದೇಹವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ನಾವು ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ಮೃತದೇಹವನ್ನು ನಮಗೆ ಹಸ್ತಾಂತರಿಸುವಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಂಚದ ಆಮಿಷ ಒಡ್ಡಿದರು. ಆದರೆ ನಾವು ಅದನ್ನು ನಿರಾಕರಿಸಿದೆವು’ ಎಂದು ವಿದ್ಯಾರ್ಥಿಯ ತಂದೆ ಹೇಳಿದ್ದಾರೆ.
.ಕೋಲ್ಕತ್ತ ವೈದ್ಯೆ ಹತ್ಯೆ: ಸಂಗೀತ ಕಾರ್ಯಕ್ರಮ ಮುಂದೂಡಿದ ಶ್ರೇಯಾ ಘೋಷಾಲ್.
ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವಿಭಾಗದ ಟ್ರೇನಿ ವಿದ್ಯಾರ್ಥಿಗಳು ಬುಧವಾರ ರಾತ್ರಿ ನಡೆಸಿದ ಪ್ರತಿಭಟನೆಯಲ್ಲಿ ಸಂತ್ರಸ್ತೆಯ ಪೋಷಕರು ಪಾಲ್ಗೊಂಡಿದ್ದರು.
.ಕೋಲ್ಕತ್ತ ವಿದ್ಯಾರ್ಥಿನಿ ಕೊಲೆ ದಿನ ಆಸ್ಪತ್ರೆಯಿದ ಮೂರು ಕರೆ, ಭಿನ್ನ ಮಾಹಿತಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.