ತಿರುವನಂತಪುರ: ‘ಮಲಯಾಳ ಸಿನಿಮಾ, ಧಾರಾವಾಹಿ ನಟಿ ಅಪರ್ಣಾ ನಾಯರ್ (33) ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದಲ್ಲಿ ಪತ್ತೆಯಾಗಿದೆ’ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

‘ಗುರುವಾರ ಸಂಜೆ 7.30ರ ಸುಮಾರಿಗೆ ಘಟನೆ ನಡೆದಿದೆ. ಅಪರ್ಣಾ ಪತಿ, ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಕರಮಾನ ಬಳಿಯಲ್ಲಿರುವ ಅವರ ನಿವಾಸದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ಪತ್ತೆಯಾದ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ಅಧಿಕಾರಿಗಳು ಈ ಕುರಿತು ನಮಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಾರಂಭಿಸಲಾಗಿದೆ’ ಎಂದರು. ಪ್ರಸ್ತುತ, ಅಪರ್ಣಾ ಅವರದ್ದು ಅಸಹಜ ಸಾವು ಪ್ರಕರಣವಾಗಿದ್ದು, ಕೌಟುಂಬಿಕ ಕಲಹವೇ ಕಾರಣವಿರಬಹುದೆಂದು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.