ನವದೆಹಲಿ: ಸತತ 3ನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್ ಅವರು ಭಾನುವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ್ದಾರೆ.

ಕಳೆದ ವರ್ಷ ನವೆಂಬರ್ 17 ರಂದು ಮುಯಿಝು ಮಾಲ್ಡೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಅವರ ಮೊದಲ ಭಾರತ ಭೇಟಿ ಇದಾಗಿದೆ.

ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಭೂತಾನ್ ಪ್ರಧಾನಿ ಭೂತಾನ್ ಪ್ರಧಾನಿ ಶೆರಿಂಗ್ ತಾಬ್ಗೆ ದೆಹಲಿಗೆ ಬಂದಿದ್ದಾರೆ.

ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲಿ ವಿದೇಶಿ ಗಣ್ಯರು ಸೇರಿದಂತೆ 10 ಮಂದಿ ಲೋಕೋ ಪೈಲೆಟ್ಗೆ ಆಹ್ವಾನ ನೀಡಲಾಗಿದೆ.
.ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲಿರುವ ಏಷ್ಯಾದ ಮೊದಲ ಲೋಕೋ ಪೈಲಟ್ ಸುರೇಖಾ.
'ಮಾಲ್ಡೀವ್ಸ್ನ ಅಧ್ಯಕ್ಷ ಮುಯಿಝು ಅವರು ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ್ದಾರೆ. ಅವರಿಗೆ ಆತ್ಮೀಯ ಸ್ವಾಗತ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಾಂಗ್ಲಾದೇಶದ ಅಧ್ಯಕ್ಷೆ ಶೇಖ್ ಹಸೀನಾ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಮುಯಿಝು, ಜಗನ್ನಾಥ್ , ಹಸೀನಾ, ಅಫೀಫ್ ಅವರಲ್ಲದೆ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಭೂತಾನ್ ಪ್ರಧಾನಿ ಶೆರಿಂಗ್ ತಾಬ್ಗೆ ಸಮಾರಂಭದಲ್ಲಿ ಭಾಗವಹಿಸುವ ಇತರ ಪ್ರಮುಖ ನಾಯಕರು.
.ಮೋದಿ ಪ್ರಮಾಣ ವಚನ ಸಮಾರಂಭ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾಗಿ ಸಾಧ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.