ಕೋಲ್ಕತ್ತ: ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಅತ್ಯಂತ ಕಠಿಣ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪತ್ರ ಬರೆದಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಮಾಹಿತಿ ನೀಡಿದ್ದಾರೆ.
.ಕದನ ಕಣದಲ್ಲಿ ಯಾವ ಸಮಸ್ಯೆಯೂ ಪರಿಹಾರವಾಗದು: ಪೋಲೆಂಡ್ನಲ್ಲಿ ಮೋದಿ ಮಾತು.ಮಾಲಿನ್ಯ ನಿಯಂತ್ರಣಕ್ಕೆ ಹೊಗೆ ಮುಕ್ತ ಗೋಪುರ: IIT ವರದಿ SCಗೆ ಸಲ್ಲಿಸಲು ಸೂಚನೆ.
ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿ ಮೇಲಿನ ಅತ್ಯಾಚಾರ– ಹತ್ಯೆ ಸಂಬಂಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಮತಾ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಇಂತಹ ಕೃತ್ಯ ಎಸಗಲು ಭಯ ಹುಟ್ಟಿಸುವಂತಹ ಶಿಕ್ಷೆಯನ್ನು ಜಾರಿಗೊಳಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೇಶದಲ್ಲಿ ದಿನಕ್ಕೆ ಸುಮಾರು 90 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ ಎಂದು ಮಮತಾ ಕಳವಳ ವ್ಯಕ್ತಪಡಿಸಿದ್ದಾರೆ.
.ಮಾಲಿವುಡ್ನಲ್ಲಿ ಲೈಂಗಿಕ ಕಿರುಕುಳ: ವರದಿ ಸಲ್ಲಿಕೆಗೆ ಕೇರಳ ಹೈಕೋರ್ಟ್ ನಿರ್ದೇಶನ.J &K ವಿಧಾನಸಭೆ ಚುನಾವಣೆ: ಕಾಂಗ್ರೆಸ್–ಎನ್ಸಿ ಮೈತ್ರಿ ಅಂತಿಮ– ಫಾರೂಕ್ ಅಬ್ದುಲ್ಲಾ.
‘ದೇಶದಲ್ಲಿ ವರದಿಯಾಗುತ್ತಿರುವ ಅತ್ಯಾಚಾರ ಪ್ರಕರಣಗಳು ನಮ್ಮೆಲ್ಲರ ಮನಸ್ಸನ್ನು ಅಲುಗಾಡಿಸಿದೆ. ಈ ಭಯಾನಕ ಕೃತ್ಯಗಳು ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮಕ್ಕಳು ಹಾಗೂ ಮಹಿಳೆಯರಿಗೆ ಸುರಕ್ಷಿತ ಸಮಾಜ ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ‘ ಎಂದು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ತ್ವರಿತವಾಗಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆಯೂ ಹಾಗೂ ವಿಚಾರಣಾ ಅವಧಿ 15 ದಿನಗಳಲ್ಲಿ ಮುಕ್ತಾಯಗೊಂಡು ತೀರ್ಪು ಪ್ರಕಟಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
.Explainer: ಜನಗಣತಿ ಸೆಪ್ಟೆಂಬರ್ನಿಂದ ಆರಂಭ; ದಶಕದ ಮಾಹಿತಿಗೆ ಏಕಿಷ್ಟು ಮಹತ್ವ..?.ಅಮೆರಿಕದ ಟೆಕ್ಸಾಸ್ನಲ್ಲಿ 90 ಅಡಿ ಎತ್ತರದ ಹನುಮಂತನ ಕಂಚಿನ ಮೂರ್ತಿ ಅನಾವರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.