ನವದೆಹಲಿ: ಮಣಿಪುರದ ಮೂರು ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

ಕೇಂದ್ರ ಗೃಹ ಸಚಿವಾಲಯದ ಆದೇಶದ ಬೆನ್ನಲ್ಲೇ ಮಣಿಪುರದ ಜೀವಹಾನಿ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಲು ಕಾರಣವಾದ ಮೂರು ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ವಹಿಸಿಕೊಂಡಿರುವ ಎನ್ಐಎ ತಂಡವು, ಪೊಲೀಸರಿಂದ ಮಾಹಿತಿ ಕಲೆಹಾಕುತ್ತಿದೆ.

ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಇಂದು ಸಂಜೆ 6 ಗಂಟೆಗೆ ಸರ್ವಪಕ್ಷಗಳ ತುರ್ತುಸಭೆ ಕರೆದಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಇತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಮುಖ ಸಭೆಯನ್ನು ನಡೆಸಲಿದ್ದಾರೆ. ಮಣಿಪುರದ ಅಸ್ಥಿರ ಪರಿಸ್ಥಿತಿಯನ್ನು ನಿಭಾಯಿಸಲು ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಮತ್ತು ಗುಪ್ತಚರ ಬ್ಯೂರೊ ನಿರ್ದೇಶಕ ತಪನ್ ದೇಕಾ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
.ಮಣಿಪುರ |ತೀವ್ರ ಹಿಂಸೆ, 5 ಜಿಲ್ಲೆ ಪ್ರಕ್ಷುಬ್ಧ: 4 ಶಾಸಕರ ಮನೆಗಳಿಗೆ ಬೆಂಕಿ .ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಬಿಜೆಪಿ, ಕಾಂಗ್ರೆಸ್ ಕಚೇರಿಗಳು ಧ್ವಂಸ.ಮಣಿಪುರ ಮತ್ತೆ ಉದ್ವಿಗ್ನ: ಮನೆಗಳು, ವಾಹನಗಳಿಗೆ ಬೆಂಕಿ ಹಚ್ಚಿದ 23 ಮಂದಿ ಬಂಧನ.Manipur violence | ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.