ಹೈದರಾಬಾದ್: ದೌಲತಾಬಾದ್ನ ಮಂಡಲದ ಸೂರಂಪಲ್ಲಿ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ‘ಭಾರತ ರಾಷ್ಟ್ರ ಸಮಿತಿ’ (ಬಿಆರ್ಎಸ್) ನಾಯಕ, ಮೇದಕ್ ಲೋಕಸಭಾ ಕ್ಷೇತ್ರದ ಸಂಸದ ಪ್ರಭಾಕರ್ ರೆಡ್ಡಿ ಅವರ ಹೊಟ್ಟೆಗೆ ವ್ಯಕ್ತಿಯೊಬ್ಬರು ಚಾಕುವಿನಿಂದ ಇರಿದಿದ್ದಾರೆ.

ಪ್ರಭಾಕರ್ ರೆಡ್ಡಿ ಅವರನ್ನು ಕೂಡಲೇ ಗಜ್ವೆಲ್ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ಗೆ ಕಳುಹಿಸಲಾಗಿದೆ. ಸದ್ಯ ರೆಡ್ಡಿಯವರ ಆರೋಗ್ಯ ಸ್ಥಿರವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ರೆಡ್ಡಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಿರದೊಡ್ಡಿ ಮಂಡಲದ ‘ರಾಜು’ ಎಂದು ಗುರುತಿಸಲಾಗಿದೆ. ಘಟನೆ ಬೆನ್ನಲ್ಲೇ ಆತನನ್ನು ಬಿಆರ್ಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೈಕುಲುಕುವ ನೆಪದಲ್ಲಿ ರೆಡ್ಡಿ ಅವರ ಹೊಟ್ಟೆಗೆ ರಾಜು ಚಾಕುವಿನಿಂದ ಇರಿದಿದ್ದಾನೆ. ರೆಡ್ಡಿ ಜತೆಗಿದ್ದ ಭದ್ರತಾ ಸಿಬ್ಬಂದಿ ತಕ್ಷಣ ಆರೋಪಿ ಕೈಯಲ್ಲಿದ್ದ ಚಾಕುವನ್ನು ಕಿತ್ತುಕೊಂಡಿದ್ದಾರೆ.

ವೈಯಕ್ತಿಕ ದ್ವೇಷವೋ ಅಥವಾ ರಾಜಕೀಯ ವೈಷಮ್ಯವೋ ಎಂಬುದು ತನಿಖೆ ನಡೆಸಲಾಗುತ್ತಿದೆ. ಆರೋಪಿ ಬಳಿಯಿದ್ದ ಯೂಟ್ಯೂಬರ್ ಎಂಬ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಾರಿ ಮೇದಕ್ ಜಿಲ್ಲೆಯ ದುಬ್ಬಾಕ್ ಕ್ಷೇತ್ರದ ಬಿಆರ್ಎಸ್ ಅಭ್ಯರ್ಥಿಯಾಗಿ ಪ್ರಭಾಕರ್ ರೆಡ್ಡಿ ಅವರು ಕಣಕ್ಕಿಳಿದಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್), ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.