ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ದೆಹಲಿಯ ಈಗಿನ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು 23 ವರ್ಷಗಳ ಹಿಂದೆ ಮೇಧಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಸಕ್ಸೇನಾ ಅವರ ಘನತೆಗೆ ಧಕ್ಕೆ ತಂದಿರುವ ಕಾರಣ ₹10 ಲಕ್ಷ ದಂಡವನ್ನೂ ವಿಧಿಸಿದ್ದಾರೆ.

ಇದೇ ವೇಳೆ ಆದೇಶವನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿದ್ದು, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ.

ಮೇಧಾ ಅವರ ವಯಸ್ಸು ಮತ್ತು ಆರೋಗ್ಯ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಒಂದು ಅಥವಾ ಎರಡು ವರ್ಷಗಳಂತಹ ದೀರ್ಘ ಅವಧಿಯ ಶಿಕ್ಷೆಯನ್ನು ನೀಡಲಾಗುತ್ತಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.

ಪಾಟ್ಕರ್ ಅವರು ತಮ್ಮ ವಿರುದ್ಧ ಹೊರಡಿಸಿದ ಪತ್ರಿಕಾ ಹೇಳಿಕೆಯೊಂದು ಮಾನಹಾನಿಕರವಾಗಿದೆ ಎಂದು ದೂರಿ ಸಕ್ಸೇನಾ ಅವರು 2001ರಲ್ಲಿ ದೂರು ದಾಖಲಿಸಿದ್ದರು. ಆಗ ಸಕ್ಸೇನಾ ಅವರು ನ್ಯಾಷನಲ್ ಕೌನ್ಸಿಲ್ ಆಫ್ ಸಿವಿಲ್ ಲಿಬರ್ಟೀಸ್ನ ಅಧ್ಯಕ್ಷರಾಗಿದ್ದರು.

ಸಕ್ಸೇನಾ ಅವರನ್ನು ಮೇಧಾ ಅವರು ‘ಹೇಡಿ, ದೇಶಭಕ್ತ ಅಲ್ಲ’ ಎಂದು ಕರೆದಿದ್ದು ಹಾಗೂ ಅವರು ಹವಾಲಾ ವಹಿವಾಟಿನಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದು ಮಾನಹಾನಿಕರವಾಗಿತ್ತು. ಸಕ್ಸೇನಾ ಕುರಿತು ನಕಾರಾತ್ಮಕ ಚಿತ್ರಣ ಮೂಡಿಸುವಂತೆಯೂ ಇದ್ದವು ಎಂದು ಕೋರ್ಟ್ ಮೇ 24ರಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.