ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಮೂರನೇ ಬಾರಿಗೆ ₹400 ಕೋಟಿ ಹಣಕ್ಕೆ ಬೇಡಿಕೆಯಿಟ್ಟು ಅಪರಿಚಿತ ವ್ಯಕ್ತಿ ಇ– ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.

ಸೋಮವಾರ ಇ –ಮೇಲ್ ಬಂದಿದ್ದು, ನಾಲ್ಕು ದಿನಗಳಲ್ಲಿ 3ನೇ ಬಾರಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಶುಕ್ರವಾರ ₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಇ–ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದರು. ಶನಿವಾರ ₹200 ಕೋಟಿ ಹಣಕ್ಕೆ ಬೇಡಿಕೆ ಇಟ್ಟು ಇ– ಮೇಲ್ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇ–ಮೇಲ್ ಕಳುಹಿಸುವವರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ, ಬಿಹಾರದ ದರ್ಭಾಂಗದಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದರು. ಆರೋಪಿಗಳು ಮುಂಬೈನಲ್ಲಿರುವ ಸರ್ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು.
.₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.