ನವದೆಹಲಿ: ಆನ್ಲೈನ್ ಸುದ್ದಿತಾಣ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನ್ಯೂಸ್ಕ್ಲಿಕ್ನ ಪ್ರಧಾನ ಸಂಪಾದಕರೂ ಆಗಿರುವ ಪ್ರಬೀರ್ ಪುರಕಾಯಸ್ಥ ಮತ್ತು ನ್ಯೂಸ್ಕ್ಲಿಕ್ನ ಮಾನವ ಸಂಪನ್ಮೂಲ ವಿಭಾಗದ ಅಮಿತ್ ಚಕ್ರವರ್ತಿ ಅವರನ್ನು ಕೋರ್ಟ್ಗೆ ಹಾಜರಿಪಡಿಸಿದ ಬಳಿಕ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿತಾಣವು ಚೀನಾ ಪರ ಪ್ರಚಾರಾಂದೋಲನ ನಡೆಸಲು ಹಣ ಪಡೆದಿದೆ ಎಂಬ ಆರೋಪದ ಅಡಿಯಲ್ಲಿ ಅದರ ವಿರುದ್ಧ ಅಕ್ರಮ ಚಟುವಟಿಕೆಗಳ (ನಿಯಂತ್ರಣ) ಕಾಯ್ದೆಯ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಸುದ್ದಿಸಂಸ್ಥೆಯ ಕೆಲವು ಪತ್ರಕರ್ತರನ್ನು 6 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ.

ಆನ್ಲೈನ್ ಸುದ್ದಿತಾಣ ನ್ಯೂಸ್ಕ್ಲಿಕ್ ಹಾಗೂ ಅಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಸೇರಿದ 30 ಸ್ಥಳಗಳಲ್ಲಿ ಮಂಗಳವಾರ ಶೋಧ ನಡೆಸಿರುವ ದೆಹಲಿ ಪೊಲೀಸರು, ಸುದ್ದಿತಾಣದ ಕಚೇರಿಯ ಬಾಗಿಲಿಗೆ ಬೀಗ ಜಡಿದು, ಮೊಹರು ಹಾಕಿದ್ದಾರೆ.

ನ್ಯೂಸ್ಕ್ಲಿಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 37 ಮಂದಿ ಪುರುಷರನ್ನು ದೆಹಲಿ ಪೊಲೀಸ್ ವಿಶೇಷ ಘಟಕದ ಕಚೇರಿಯಲ್ಲಿ ವಿಚಾರಣೆಗೆ ಗುರಿಪಡಿಸಲಾಗಿದೆ. ಒಂಬತ್ತು ಮಂದಿ ಮಹಿಳೆಯರನ್ನು ಅವರ ನಿವಾಸದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತು ಇತರ ಕೆಲವು ವಸ್ತುಗಳನ್ನು ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.