ನಬರಂಗಪುರ (ಒಡಿಶಾ): ಸರ್ಕಾರಿ ಶಾಲೆಯೊಂದರ ಶೌಚಾಲಯದಲ್ಲಿ 6ನೇ ತರಗತಿ ಓದುತ್ತಿರುವ ಬುಡಕಟ್ಟು ವಿದ್ಯಾರ್ಥಿನಿ ಮೇಲೆ ಇಬ್ಬರು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ನ. 9ರಂದು ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಟ್ಟೆ ನೋವಿನಿಂದ ಬಳಲುತಿದ್ದ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಆಕೆಯನ್ನು ವಿಚಾರಿಸಿದಾಗ, 'ಮುಖ್ಯೋಪಾಧ್ಯಾಯ ಹಾಗೂ ಸಹಾಯಕ ಶಿಕ್ಷಕ ಶೌಚಾಲಯಕ್ಕೆ ನುಗ್ಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ' ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯನ್ನು ನಬರಂಗಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಉತ್ತರ ಪ್ರದೇಶದಲ್ಲಿ ಬಾಲಕಿ ಅಪಹರಿಸಿ, ಒಂದು ತಿಂಗಳು ಅತ್ಯಾಚಾರ: ಆರೋಪಿ ಸೆರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.