ನವದೆಹಲಿ: ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಗೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ್ದ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮಾಜಿ ರಾಷ್ಟ್ರಪತಿ ನೇತೃತ್ವದ ಸಮಿತಿಯು ಈ ವರದಿಯನ್ನು ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಮಾರ್ಚ್ನಲ್ಲೇ ನೀಡಿತ್ತು.

'ಒಂದು ರಾಷ್ಟ್ರ, ಒಂದು ಚುನಾವಣೆ'ಯು ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ನೀಡಿದ್ದ ಪ್ರಮುಖ ಆಶ್ವಾಸನೆಗಳಲ್ಲಿ ಒಂದಾಗಿತ್ತು.

ಮೋದಿ ಸರ್ಕಾರ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಿ 100 ದಿನಗಳನ್ನು ಪೂರೈಸಿದ ಸಂದರ್ಭ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, 'ಒಂದು ರಾಷ್ಟ್ರ, ಒಂದು ಚುನಾವಣೆ' ವ್ಯವಸ್ಥೆ ಇದೇ ಅವಧಿಯಲ್ಲಿ ಜಾರಿಗೆ ಬರಲಿದೆ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.