ನವದೆಹಲಿ: ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯ ಜನವರಿ 5 ರವರೆಗೆ ವಿಸ್ತರಿಸಿದೆ.

ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು, ಆರೋಪಿಗಳಾದ ಡಿ. ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ ಹಾಗೂ ನೀಲಂ ದೇವಿ ಅವರ ಕಸ್ಟಡಿ ಅವಧಿಯನ್ನು 15 ದಿನಗಳವರೆಗೆ ವಿಸ್ತರಿಸಿದ್ದಾರೆ.

ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸರು ಗುರುವಾರ ಇಲ್ಲಿನ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಹಾಜರುಪಡಿಸಿದ್ದರು. ಸದ್ಯದಲ್ಲೇ ನ್ಯಾಯಾಲಯ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ (ಡಿಸೆಂಬರ್ 13) ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು. ಬುಧವಾರ ಕಲಾಪ ನಡೆಯುತ್ತಿರುವಾಗಲೇ ಸಾಗರ್ ಶರ್ಮಾ ಮತ್ತು ಮನೋರಂಜನ್ ಎಂಬ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್ ಕ್ಯಾನ್’ ಹಾರಿಸಿ ದಾಂದಲೆ ಎಬ್ಬಿಸಿದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು.
.ಮೈಸೂರು | ಸಂಸತ್ ಭದ್ರತಾ ಲೋಪ: ದೆಹಲಿ ಪೊಲೀಸರಿಂದ ಡಿ.ಮನೋರಂಜನ್ ಪೋಷಕರ ವಿಚಾರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.