ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಪ್ರವಾಹ ಸ್ಥಿತಿ; ರಾಷ್ಟ್ರೀಯ ಹೆದ್ದಾರಿ–3 ಬಂದ್‌

Published : 25 ಜುಲೈ 2024, 5:01 IST
Last Updated : 25 ಜುಲೈ 2024, 5:01 IST
ಫಾಲೋ ಮಾಡಿ
Comments

ಶಿಮ್ಲಾ/ಮನಾಲಿ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ–3ರಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬುಧವಾರ ಮೇಘಸ್ಪೋಟ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರಾಜ್ಯದಲ್ಲಿ ಒಟ್ಟು 15 ರಸ್ತೆಗಳನ್ನು ಬಂದ್‌ ಮಾಡಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ತೀರಾ ಅಗತ್ಯವಿದ್ದರೆ ಮಾತ್ರ ಜಾಗರೂಕತೆಯಿಂದ ಪ್ರಯಾಣಿಸಿ, ಮಾರ್ಗದಲ್ಲಿ ಸಂಭವನೀಯ ಅಪಾಯದ ಬಗ್ಗೆ ಜಾಗೃತರಾಗಿರಿ ಎಂದು ಸಾರ್ವಜನಿಕರಿಗೆ ‍ಪ್ರಕಟಣೆ ಹೊರಡಿಸಲಾಗಿದೆ.

ಸ್ಥಳೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಂಭವ ಇರುವ ಕಾರಣ ಯೆಲ್ಲೋ ಅಲರ್ಟ್‌ ಘೋಷಿಸಿದೆ. 

ಕಳೆದ ಜೂನ್‌ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ 49 ಜನ ಮೃತಪಟ್ಟಿದ್ದು, ₹389 ಕೋಟಿ ನಷ್ಟವಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT