ಠಾಣೆ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದ ಸಂಬಂಧ ನವಿ ಮುಂಬೈ ಪೊಲೀಸರು ಹರಿಯಾಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ದೀಪಕ್ ಹವಾಸಿಂಗ್ ಗೊಗಲಿಯಾ ಅಲಿಯಾಸ್ ಜಾನಿ ವಾಲ್ಮೀಕಿ(30) ಎಂದು ಗುರುತಿಸಲಾಗಿದೆ. ಈತ ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ಲಾರೆನ್ಸ್ ಬಿಷ್ಣೋಯಿ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ಗಳ ಸಕ್ರಿಯ ಸದಸ್ಯನಾಗಿದ್ದ. ಇದೇ ಪ್ರಕರಣದಲ್ಲಿ ಈಗಾಗಲೇ ಬಂಧಿತವಾಗಿರುವ ಇತರ ನಾಲ್ವರಿಗೆ ಈತ ವಸತಿ ಸೌಲಭ್ಯ ಕಲ್ಪಿಸಿದ್ದ. ವಿಡಿಯೊ ಕಾಲ್ ಮೂಲಕ ಅವರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ಭಿವಾನಿಯಲ್ಲಿ ಶನಿವಾರ ನವಿ ಮುಂಬೈ ಪೊಲೀಸರು ಗೊಗಾಲಿಯಾನನ್ನು ಬಂಧಿಸಿದ್ದಾರೆ. ಆತನನ್ನು ಭಾನುವಾರ ಭಿವಾನಿಯ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಬಂಧಿತ ಹಾಜರುಪಡಿಸಲಾಗಿತ್ತು. ಜೂನ್ 5ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಆದೇಶಿಸಿದ್ದಾರೆ. ಆತನನ್ನು ಮುಂಬೈಗೆ ಕರೆತರಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.