ನವದೆಹಲಿ: 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಮನವಿ ಮಾಡಿದರು.

'ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ತೆಲಂಗಾಣದ ನನ್ನ ಸಹೋದರ, ಸಹೋದರಿಯರಿಗೆ ಮನವಿ ಮಾಡುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರಿಗೆ ಶುಭಾಶಯಗಳು' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಮುಖಾಂಶಗಳು:

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭ, ಸಂಜೆ 6 ಗಂಟೆಗೆ ಮುಕ್ತಾಯ.

ಬಿಜೆಪಿ, ಕಾಂಗ್ರೆಸ್ ಹಾಗೂ ಬಿಆರ್ಎಸ್ ಕಣದಲ್ಲಿರುವ ಪ್ರಮುಖ ಪಕ್ಷಗಳು.

221 ಮಹಿಳೆಯರು ಮತ್ತು ತೃತೀಯಲಿಂಗಿ ಸೇರಿದಂತೆ 109 ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಂದ 2,290 ಅಭ್ಯರ್ಥಿಗಳು ಕಣದಲ್ಲಿ.

3.17 ಕೋಟಿ–ಒಟ್ಟು ಮತದಾರರ ಸಂಖ್ಯೆ.

35,655 ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಮತಗಟ್ಟೆಗಳು.

ಪ್ರಥಮ ಬಾರಿಗೆ ವಿಕಲಚೇತನರು ಮತ್ತು 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ

ಮತ ಚಲಾಯಿಸಿದ ಮೆಗಾಸ್ಟಾರ್ ಚಿರಂಜೀವಿ:

ಮೆಗಾಸ್ಟಾರ್ ಚಿರಂಜೀವಿ, ಪತ್ನಿ ಸುರೇಖಾ ಹಾಗೂ ಮಗಳು ಶ್ರೀಜಾ ಅವರೊಂದಿಗೆ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಆಗಮಿಸಿದರು. ಸರತಿ ಸಾಲಿನಲ್ಲಿ ನಿಂತು ಅವರು ಮತ ಚಲಾಯಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಈ ಹಿಂದೆ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು. 2008ರಲ್ಲಿ ಅಂದಿನ ಸಂಯುಕ್ತ ಆಂಧ್ರಪ್ರದೇಶದಲ್ಲಿ ಪ್ರಜಾರಾಜ್ಯಂ ಪಕ್ಷವನ್ನು ಸ್ಥಾಪಿಸಿದರು. 2009ರ ಸಾರ್ವತ್ರಿಕ ಚುನಾವಣೆಯಲ್ಲಿ, ಪಕ್ಷ ಆಂಧ್ರ ಪ್ರದೇಶ ವಿಧಾನಸಭೆಯ 294 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿತು.

2011ರಲ್ಲಿ, ಚಿರಂಜೀವಿ ಪ್ರಜಾರಾಜ್ಯಂ ಪಕ್ಷವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದರು. 2012ರ ಮಾರ್ಚ್ 29ರಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. 2014ರ ಚುನಾವಣೆಯ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ.

ಶಾಂತಿಯುತ ಮತದಾನ:

‘119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ' ಎಂದು ತೆಲಂಗಾಣ ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.
.ತೆಲಂಗಾಣ ವಿಧಾನಸಭೆ ಚುನಾವಣೆ 2023: ಮತದಾನ ಆರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.