ನವದೆಹಲಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಜಿ– 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ನಿನ್ನೆ (ಶನಿವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ನಾಯಕರು ವ್ಯಾಪಾರ ಸಂಬಂಧಗಳನ್ನು ಗಾಢವಾಗಿಸುವ ಮತ್ತು ಹೂಡಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಸಮಾಲೋಚಿಸಿದರು.

ಶುಕ್ರವಾರವೇ ನಗರಕ್ಕೆ ಬಂದಿರುವ ಸುನಕ್ ಅವರು, ಶೃಂಗಸಭೆಯ ಮೊದಲ ಗೋಷ್ಠಿಯ ನಂತರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು.

ಸಭೆಯ ನಂತರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮೋದಿ ಅವರು, ‘ದೆಹಲಿಯಲ್ಲಿ ಜಿ–20 ಶೃಂಗಸಭೆಯ ಸಂದರ್ಭದಲ್ಲಿ ರಿಷಿ ಸುನಕ್ ಅವರನ್ನು ಭೇಟಿಯಾಗಿರುವುದು ಅದ್ಭುತವಾಗಿದೆ. ನಾವು ವ್ಯಾಪಾರ ಸಂಬಂಧಗಳನ್ನು ಗಾಢವಾಗಿಸಲು ಮತ್ತು ಹೂಡಿಕೆಯನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ಉಭಯ ರಾಷ್ಟ್ರಗಳು ಸಮೃದ್ಧ ಮತ್ತು ಸುಸ್ಥಿರ ಗ್ರಹಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತವೆ ಎಂದು ಅವರು ಹೇಳಿದರು.

ಮೋದಿ ಅವರು ಜಪಾನ್ ಪ್ರಧಾನಿ ಫ್ಯುಮಿಯೊ ಕಿಶಿಡಾ ಅವರೊಂದಿಗೆ ಸಹ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.