ರಾಂಚಿ/ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರ ಬಂಧನದ ಅವಧಿಯನ್ನು 5 ದಿನಗಳವರೆಗೆ ವಿಸ್ತರಿಸಿ ಇಲ್ಲಿನ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಆದೇಶ ಹೊರಡಿಸಿದೆ.

ಇಂದು ಮುಂಜಾನೆ ಬಿಗಿ ಭದ್ರತೆಯ ನಡುವೆ ಹೇಮಂತ್ ಸೊರೇನ್ ಅವರನ್ನು ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಫೆ 2ರಂದು ಹೇಮಂತ್ ಸೊರೇನ್ ಅವರನ್ನು 10 ದಿನಗಳ ಕಸ್ಟಡಿಗೆ ನೀಡುವಂತೆ ಇ.ಡಿ ಕೋರಲಾಗಿತ್ತು. ಆದರೆ, 5 ದಿನಗಳವರೆಗೆ ಕಸ್ಟಡಿಗೆ ನೀಡಲು ಕೋರ್ಟ್ ಒಪ್ಪಿಗೆ ಸೂಚಿಸಿತ್ತು.

ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್ ಅವರನ್ನು ಜನವರಿ 31ರಂದು ಬಂಧಿಸಿತ್ತು. ಅದಕ್ಕೂ ಮುನ್ನ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಆಡಳಿತಾರೂಢ ಮೈತ್ರಿಕೂಟದ ನೇತೃತ್ವ ವಹಿಸಿದ್ದ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಶಾಸಕಾಂಗ ಪಕ್ಷದ ನಾಯಕನಾಗಿ ಹಿರಿಯ ನಾಯಕ ಚಂಪೈ ಸೊರೇನ್ ಸರ್ವಾನುಮತದಿಂದ ಆಯ್ಕೆಯಾಗಿದ್ದರು. ಫೆಬ್ರುವರಿ 2ರಂದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
.₹600 ಕೋಟಿ ಭೂಹಗರಣದ ಆರೋಪ |ಹೇಮಂತ್ ಸೊರೇನ್ ಸೆರೆ: ಚಂಪೈ ಜಾರ್ಖಂಡ್ನ ಹೊಸ ಸಿಎಂ.ವಿಶ್ವಾಸಮತ ಸಾಬೀತುಪಡಿಸಿದ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.