ನವದೆಹಲಿ: ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಯಿತು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪರವಾಗಿ ಪುತ್ರ, ಜೆಡಿಯು ನಾಯಕ ರಾಮನಾಥ ಠಾಕೂರ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಪರವಾಗಿ ಪುತ್ರಿ ನಿತ್ಯಾ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪರವಾಗಿ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿಯನ್ನು ಸ್ವೀಕರಿಸಿದರೆ, ಇತ್ತ ಪಿ.ವಿ.ನರಸಿಂಹರಾವ್ ಅವರ ಪುತ್ರ ಪಿ.ವಿ.ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಕೇಂದ್ರ ಸಚಿವ ಸಂಪುಟ ನಾಯಕರು ಉಪಸ್ಥಿತರಿದ್ದರು

‘ಈ ಮಹನೀಯರು ದೇಶಕ್ಕಾಗಿ ನೀಡಿದ ಸೇವೆಯನ್ನು ಪರಿಗಣಿಸಿ ಅತ್ಯುನ್ನತ ನಾಗರಿಕ ಗೌರವಕ್ಕೆ ಆಯ್ಕೆ ಮಾಡಲಾಗಿದೆ’ ಎಂದು ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ಖಾತೆಯಲ್ಲಿ ಪ್ರಕಟಿಸಿದ್ದರು.

ಕೇಂದ್ರ ಸರ್ಕಾರವು, ಈ ವರ್ಷ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಿಸಿತ್ತು.
.ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್ ಸೇರಿ ನಾಲ್ವರಿಗೆ ‘ಭಾರತ ರತ್ನ’ ಪ್ರದಾನ.ಭಾರತ ರತ್ನ ಪ್ರದಾನ ದಿನ ಅಂಗರಕ್ಷಕರ ಬದಲಾವಣೆ ಕಾರ್ಯಕ್ರಮ ಇಲ್ಲ: ರಾಷ್ಟ್ರಪತಿ ಭವನ.ಭಾರತ ರತ್ನ ಘೋಷಣೆ ಬಗ್ಗೆ ಭಿನ್ನಾಭಿಪ್ರಾಯ ಬೇಡ: ವಿಪಕ್ಷಗಳಿಗೆ ದೇವೇಗೌಡ ಕಿವಿಮಾತು.ಸ್ವಾಮಿನಾಥನ್ ವರದಿ ಜಾರಿಗೊಳಿಸದೆ ಭಾರತ ರತ್ನ ನೀಡುವುದು ಸರಿಯಲ್ಲ: ನಾಗಮೋಹನದಾಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.