ಭಾಗಲ್ಪುರ (ಬಿಹಾರ): ಬಿಹಾರದ ಭಾಗಲ್ಪುರ ಜಿಲ್ಲೆಯ ದೇವಸ್ಥಾನವೊಂದರಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದನ್ನು ಖಂಡಿಸಿ ಸ್ಥಳೀಯರು ಭಾನುವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಸನ್ಹೌಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದೇವಸ್ಥಾನಕ್ಕೆ ನುಗ್ಗಿ ಅಲ್ಲಿದ್ದ ವಿಗ್ರಹಗಳನ್ನು ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ಒಬ್ಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಭಾನುವಾರ ಮುಂಜಾನೆ ವಿಷಯ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯಲ್ಲಿ ಜನರು ಸನ್ಹೌಲ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಕಾರರು ರಸ್ತೆಗಳನ್ನು ಬಂದ್ ಮಾಡಿ ಟೈರ್ಗಳನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದರು.
.ದೇವರ ವಿಗ್ರಹಗಳ ಕಳ್ಳತನ: ಆರೋಪಿಗಳ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.