ನವದೆಹಲಿ: ವಿರೋಧ ಪಕ್ಷದ ನಾಯಕನಾಗುವವರೆಗೂ ಜವಾಬ್ದಾರಿಯಿಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕಾರವನ್ನು ಅನುಭವಿಸುತ್ತಿದ್ದರು ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಟೀಕಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಠಾಕೂರ್, ‘ಈ ಬಾರಿಯ ಚುನಾವಣೆಯು ಸಂವಿಧಾನ ವಿರೋಧಿಗಳನ್ನು ಮೂರನೇ ಬಾರಿಗೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ’ ಎಂದು ಪರೋಕ್ಷವಾಗಿ ಕುಟುಕಿದರು.

ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ‘ಕಳೆದ ಕೆಲವು ವರ್ಷಗಳಿಂದ ಜವಾಬ್ದಾರಿಯಿಲ್ಲದೇ ಅಧಿಕಾರವನ್ನು ಅನುಭವಿಸುತ್ತಿದ್ದರು. ಇದು ಅವರಿಗೆ ಅಗ್ನಿಪರೀಕ್ಷೆಯಾಗಿದೆ’ ಎಂದರು.

‘ಸದಾ ಗೈರಾಗುವ ವ್ಯಕ್ತಿ ಪ್ರಧಾನಿಯವರಂತೆ ಕೊನೆಯವರೆಗೆ ಸದನದಲ್ಲಿ ಕುಳಿತುಕೊಳ್ಳಲು ಸಾಧ್ಯವೇ? ಈಗಲೂ ಅವರು ಇಲ್ಲಿ ಕಾಣಿಸುತ್ತಿಲ್ಲ’ ಎಂದು ರಾಹುಲ್ ಗಾಂಧಿ ಅವರ ಅನುಪಸ್ಥಿತಿಯ ಬಗ್ಗೆ ಅಸಮಾಧಾನ ಹೊರಹಾಕಿದರು.

‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗಳಿಸಿದ್ದು, 99 ಸ್ಥಾನಗಳು 240 ಸ್ಥಾನಗಳಿಗಿಂತ ಹೆಚ್ಚು ಎಂದು ಸಾಬೀತುಪಡಿಸಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ’ ಎಂದು ಲೇವಡಿ ಮಾಡಿದರು.

ಅನುರಾಗ್ ಠಾಕೂರ್ ಭಾಷಣದ ವೇಳೆ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.