ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್ ಪರೀಕ್ಷೆ ವಿಚಾರದಲ್ಲಿ ಪ್ರಧಾನಿ ಮೋದಿ ಮೌನ: ರಾಹುಲ್ ಗಾಂಧಿ ವಾಗ್ದಾಳಿ

Published 18 ಜೂನ್ 2024, 9:56 IST
Last Updated 18 ಜೂನ್ 2024, 9:56 IST
ಅಕ್ಷರ ಗಾತ್ರ

ನವದೆಹಲಿ: ನೀಟ್ ಪರೀಕ್ಷೆ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ‌ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ನೀಟ್ ಪರೀಕ್ಷೆಯಲ್ಲಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದರೂ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ ಮೌನಕ್ಕೆ ಶರಣಾಗಿದ್ದಾರೆ' ಎಂದು ಹೇಳಿದ್ದಾರೆ.

'ಯೋಜಿತ ರೀತಿಯಲ್ಲಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಇದಕ್ಕೆ ಬಿಹಾರ, ಗುಜರಾತ್ ಮತ್ತು ಹರಿಯಾಣದಲ್ಲಿ ಆರೋಪಿಗಳನ್ನು ಬಂಧಿಸಿರುವುದೇ ಸಾಕ್ಷಿ. ಬಿಜೆಪಿ ಆಡಳಿತವಿರುವ ಈ ರಾಜ್ಯಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ಕೇಂದ್ರವಾಗಿವೆ' ಎಂದು ಅವರು ಪ್ರತಿಪಾದಿಸಿದ್ದಾರೆ.

'ಪ್ರಶ್ನೆ ಪತ್ರಿಕೆ ಸೋರಿಕೆಗೆ ಮುಕ್ತಿ ನೀಡುವ ಉದ್ದೇಶದಿಂದ ಕಠಿಣ ಕಾನೂನು ರೂಪಿಸಿ ಯುವಕರ ಭವಿಷ್ಯವನ್ನು ಸುಭದ್ರಗೊಳಿಸುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದ್ದೆವು. ಇಂದು ಪ್ರತಿಪಕ್ಷವಾಗಿ ಆ ಜವಾಬ್ದಾರಿಯನ್ನು ನಿರ್ವಹಿಸಲು ದೇಶದ ವಿದ್ಯಾರ್ಥಿಗಳ ಧ್ವನಿಯಾಗಿ ಸಂಸತ್ತಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಇಂತಹ ಕಠಿಣ ನೀತಿಗಳನ್ನು ರೂಪಿಸಲು ಬದ್ಧರಾಗಿದ್ದೇವೆ' ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT