ಶನಿವಾರ, 28 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಚನ್‌ಜುಂಗಾ ರೈಲು ಅಪಘಾತ: ಘಟನಾ ಸ್ಥಳಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ

Published : 17 ಜೂನ್ 2024, 11:34 IST
Last Updated : 17 ಜೂನ್ 2024, 11:34 IST
ಫಾಲೋ ಮಾಡಿ
Comments

ಕೋಲ್ಕತ್ತ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಪರಿಸ್ಥಿತಿ ಅವಲೋಕಿಸಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಹೋಗುವ ದಾರಿ ಕಿರಿದಾಗಿದ್ದು, ಬೈಕ್‌ನ ಹಿಂದೆ ಕೂತು ಅಶ್ವಿನಿ ವೈಷ್ಣವ್ ಘಟನಾ ಸ್ಥಳ ತಲುಪಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇಂದು ಬೆಳಿಗ್ಗೆ ಪಶ್ವಿಮ ಬಂಗಾಳದ ಜಲಪಾಯ್ಗುಡಿ ನಿಲ್ದಾಣದ ಸಮೀಪದ ರಂಗಪಾಣಿಯಲ್ಲಿ ಸಂಭವಿಸಿದ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ 15 ಜನ ಮೃತಪಟ್ಟು, 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ರೈಲ್ವೆ ಮಂಡಳಿಯ ಅಧಿಕಾರಿಗಳು ಸಿಗ್ನಲ್‌ನಲ್ಲಿಯ ತಾಂತ್ರಿಕ ದೋಷದಿಂದ ಈ ಅಪಘಾತ ಸಂಭವಿಸಿರಬಹುದು ಎಂಬ ಸಂಗತಿಯನ್ನು ಪ್ರಾಥಮಿಕವಾಗಿ ಕಂಡುಕೊಂಡಿದ್ದಾರೆ.

ಈ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT